ಕೊಡಗು | ಕೇಂದ್ರ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ತಲುಪಲಿ: ಸಂಸದ ಯದುವೀರ್

Date:

ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚಿಸಿದರು.

- Advertisement -

ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ, ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಸಭೆಯಲ್ಲಿ ಮಡಿಕೇರಿ ನಗರದ ಪಾರಂಪರಿಕ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವಿಚಾರ ಪ್ರಮುಖವಾಗಿ ಚರ್ಚೆಗೆ ಒಳಪಟ್ಟಿತು. ಈ ಸಂಬಂಧ ಈಗಾಗಲೇ ಹಲವು ಬಾರಿ ಚರ್ಚೆ ನಡೆಸಲಾಗಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಯಾವುದೇ ಸಬೂಬು ನೀಡದೆ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹಾಗೂ ಸುಜಾ ಕುಶಾಲಪ್ಪ ಅವರು ಕೂಡ ತ್ಯಾಜ್ಯ ನಿರ್ವಹಣೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಿದರು. ದಿಶಾ ಸಮಿತಿ ಸದಸ್ಯರಾದ ಡಾ. ನವೀನ್ ಕುಮಾರ್, ಆರ್.ಕೆ. ಚಂದ್ರು, ನಾಗೇಶ್ ಕುಂದಲ್ಪಾಡಿ ಹಾಗೂ ಕಾಂತಿ ಸತೀಶ್ ಅವರು ಈ ಅಭಿಪ್ರಾಯಕ್ಕೆ ಧ್ವನಿಗೂಡಿಸಿದರು.

ಸಭೆಯಲ್ಲಿ ಮಾತನಾಡಿದ ನಾಗೇಶ್ ಕುಂದಲ್ಪಾಡಿ ಅವರು ಅಮೃತ್ 2.0, ಜಲಜೀವನ್ ಮಿಷನ್, ವಿಶ್ವಕರ್ಮ ಯೋಜನೆ, ಸ್ವಚ್ಛ ಭಾರತ ಅಭಿಯಾನ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯೆ ಸುಜಾ ಕುಶಾಲಪ್ಪ ಅವರು ಜಿಲ್ಲೆಯ ರಸ್ತೆ ಬದಿಗಳಲ್ಲಿ ಕಸ ಎಸೆಯುವ ಪ್ರವೃತ್ತಿಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಕೂಡ ಕಸ ನಿರ್ವಹಣೆ ಸಮರ್ಪಕವಾಗಿರಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶೇ.100ರಷ್ಟು ತ್ಯಾಜ್ಯ ವಿಲೇವಾರಿ ಸಾಧಿಸುವ ಗುರಿಯೊಂದಿಗೆ ಕಾರ್ಯ ನಡೆಯುತ್ತಿದ್ದು, ಅಗತ್ಯವಿರುವ ಕಡೆಗಳಲ್ಲಿ ಡಸ್ಟ್‌ಬಿನ್‌ಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಮೃತ್ 2.0 ಯೋಜನೆ ಪ್ರಗತಿ ಕುರಿತು ಮಾಹಿತಿ ನೀಡಿದ ಎಂಜಿನಿಯರ್ ಜಯಕುಮಾರ್, ಜಿಲ್ಲೆಯ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ ಹಾಗೂ ಪೊನ್ನಂಪೇಟೆ ಪಟ್ಟಣಗಳಲ್ಲಿ ಸುಮಾರು ₹45 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದ್ದು, ಶೇ.70ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಸಂಸದ ಯದುವೀರ್ ಒಡೆಯರ್ ಮಾತನಾಡಿ, ಹೆಚ್ಚಿನ ಮಳೆಯಾಗುವ ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಟ್ಯಾಂಕರ್ ಅವಲಂಬನೆ ಬೇಸರದ ಸಂಗತಿಯಾಗಿದೆ. ಕೆರೆ, ಕಟ್ಟೆ, ಬಾವಿ, ಹಳ್ಳ ಮತ್ತು ಜಲಮೂಲಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆ ಕುರಿತು ಮಾಹಿತಿ ನೀಡಿದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್, ಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ಹೇಳಿದರು. ಯೋಜನೆಗಳ ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು.

ಸಭೆಯಲ್ಲಿ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) ಮೊಬೈಲ್ ಟವರ್‌ಗಳ ನಿರ್ಮಾಣಕ್ಕೆ ಅಗತ್ಯ ಭೂಮಿ ಒದಗಿಸುವ ಬಗ್ಗೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳ ಮೂಲಸೌಲಭ್ಯ, ಗುಣಮಟ್ಟದ ಆಹಾರ ಪೂರೈಕೆ, ವಿದ್ಯಾರ್ಥಿ ವಸತಿ ಬೇಡಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು. ಜಿಲ್ಲೆಯಲ್ಲಿ ಹೆಚ್ಚಿನ ವಿದ್ಯಾರ್ಥಿ ನಿಲಯಗಳ ಅಗತ್ಯವಿದ್ದು, ಹೊಸ ನಿಲಯಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸದಸ್ಯರು ಸಲಹೆ ನೀಡಿದರು.

ವನ್ಯಪ್ರಾಣಿ ಮತ್ತು ಮಾನವ ಸಂಘರ್ಷ ತಡೆಗೆ ಪಕ್ಷಾತೀತವಾಗಿ ಸಮಗ್ರ ಕಾರ್ಯಯೋಜನೆ ರೂಪಿಸುವ ಅಗತ್ಯವಿದೆ ಎಂದು ಸಂಸದರು ತಿಳಿಸಿದರು. ಪ್ರೋಜೆಕ್ಟ್ ಎಲಿಫೆಂಟ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಅಗತ್ಯ ಅನುದಾನ ಲಭ್ಯವಾಗಿದ್ದು, ವನ್ಯಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುಜಾ ಕುಶಾಲಪ್ಪ ಅವರು ಅರಣ್ಯ ಇಲಾಖೆ ರೈತರು ಹಾಗೂ ಸ್ಥಳೀಯರಿಗೆ ಅನಗತ್ಯ ತೊಂದರೆ ನೀಡಬಾರದು ಎಂದು ಹೇಳಿದರು. ಎಸ್.ಎಲ್. ಭೋಜೇಗೌಡ ಅವರು ವನ್ಯಪ್ರಾಣಿಗಳು ಕಾಡಿನಲ್ಲೇ ಉಳಿಯಲು ಹಣ್ಣಿನ ಗಿಡಗಳ ನೆಡುವಿಕೆ ಹೆಚ್ಚಿಸಬೇಕು ಹಾಗೂ ನೀಲಗಿರಿ ಮತ್ತು ಅಕೇಶಿಯಾ ಮರಗಳ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಈ ವೀಡಿಯೋ ವೀಕ್ಷಿಸಿ:https://youtu.be/XSGtBWf3zuQ?si=LfPgKWVQ0N87rcrv

ಜಿಲ್ಲೆಯಲ್ಲಿ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತರಿಗೆ ಅಗತ್ಯ ಭಿತ್ತನೆ ಬೀಜ ಮತ್ತು ರಸಗೊಬ್ಬರಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸಂಸದರು ಸೂಚಿಸಿದರು. ಕೇಂದ್ರ ಸರ್ಕಾರದ ಕೃಷಿ ಹಾಗೂ ಕಾಫಿ ಬೆಳೆಗಾರರ ಯೋಜನೆಗಳ ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ತಲುಪಿಸುವ ಅಗತ್ಯವಿದೆ ಎಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಂಡ್ಯ ಜಿಲ್ಲೆಯ 480 ಶಾಲೆಗಳ ಆಸ್ತಿ ನೋಂದಣಿ ಬಾಕಿ: ಭೂ ವಿವಾದಗಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವುದೇ ಸರ್ಕಾರ?

ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಇಲಾಖೆಗಳ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...