ಬೀದರ್‌ | ಕಂದಾಯ ಇಲಾಖೆ ಸರ್ಕಾರಿ ಆಸ್ತಿ ರಕ್ಷಣೆಗೆ ಮುಂದಾಗಲಿ: ಓಂಪ್ರಕಾಶ ರೊಟ್ಟೆ

Date:

  • ಕಂದಾಯ ಅಧಿಕಾರಿಗಳಿಂದ ಸಾರ್ವಜನಿಕರು ಹಲವು ಸಮಸ್ಯೆಗಳು ಎದುರಿಸುತ್ತಿದ್ದಾರೆ.
  • ರಾಜ್ಯದ ಸರ್ಕಾರಿ ಇಲಾಖೆಗಳ ನಿವೇಶನವನ್ನು ಸರ್ವೆ ನಡೆಸಿ ಆಸ್ತಿ ಕಾಪಾಡಬೇಕು

ಸರ್ಕಾರದ ಆಸ್ತಿಗಳನ್ನು ಸಾರ್ವಜನಿಕರ ಪಾಲಾಗದಂತೆ ತಡೆಗಟ್ಟಲು ಕಂದಾಯ ಇಲಾಖೆ ಕೂಡಲೇ ಕ್ರಮ ಕೈಗೊಳ್ಳುವಂತೆ ವಿಶ್ವಕ್ರಾಂತಿ ದಿವ್ಯಪೀಠ ಟ್ರಸ್ಟ್‌ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಆಗ್ರಹಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ಬೀದರ್‌ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ನಿಗದಿತ ಸ್ಥಳದಲ್ಲಿ ವಾಸ ಮಾಡದ ಕಾರಣ ಸಾರ್ವಜನಿಕರು ಹಲವು ಸಮಸ್ಯೆಗಳು ಎದುರಿಸುತ್ತಿದ್ದಾರೆ. ಭೂ ದಾಖಲೆ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಕಂದಾಯ ಇಲಾಖೆ ಅಧಿಕಾರಿಗಳನ್ನು ಹುಡುಕಲು ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಅಧಿಕಾರಿಗಳು ಎಲ್ಲಿ ಸಿಗುತ್ತಾರೆ ಎಂಬುದು ನಿಖರವಾಗಿಲ್ಲ, ಇನ್ನು ಕರೆ ಮಾಡಿದರೆ ಸರಿಯಾಗಿ ಸ್ಪಂದಿಸುವುದಿಲ್ಲ, ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸರ್ಕಾರ ಕಂದಾಯ ಇಲಾಖೆಯ ಸದರಿ ಅಧಿಕಾರಿಗಳಿಗೆ ನಿಗದಿತ ಸ್ಥಳ ಗೊತ್ತುಪಡಿಸಿ ಸಾರ್ವಜನಿಕರ ಹಿತ ಕಾಪಾಡಬೇಕೆಂದು” ಅವರು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ ? ರೈತರಿಗೆ ಬರಗಾಲದ ದಿಗಿಲು; ಅಧಿಕಾರಿಗಳಿಗೆ ಪರಿಹಾರದ ಫಸಲು!

“ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಇಲಾಖೆಗಳ ನಿವೇಶನವನ್ನು ಸರ್ವೆ ನಡೆಸಿ ಸರ್ಕಾರದ ಆಸ್ತಿ ಕಾಪಾಡಬೇಕು. ಸರ್ಕಾರಿ ಖಾಲಿ ನಿವೇಶನ ಹಾಗೂ ಕಟ್ಟಡಗಳಿಗೆ ಸುತ್ತುಗೋಡೆ ನಿರ್ಮಿಸಬೇಕು. ಇನ್ನು ವಿವಿಧ ಇಲಾಖೆಗಳಿಗೆ ತಮ್ಮ ಇಲಾಖೆಗಳ ಜಾಗ ಎಷ್ಟಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ. ಇದರಿಂದ ಸರ್ಕಾರಿ ಆಸ್ತಿಗಳನ್ನು ಒತ್ತುವರಿ ಮೂಲಕ ಉಳ್ಳವರ ಪಾಲಾಗುತ್ತಿದೆ. ಕೂಡಲೇ ಈ ಬಗ್ಗೆ ಪರಿಶೀಲಿಸಿ ಎಲ್ಲಾ ಇಲಾಖೆಗಳ ಭೂ ಆಸ್ತಿ ಕುರಿತು ದಾಖಲೆ ಸಂಗ್ರಹಿಸಿ ಸರ್ಕಾರದ ಆಸ್ತಿ ರಕ್ಷಿಸಬೇಕೆಂದು” ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ,...

ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ...

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...