ಬೀದರ್‌ | ರೈತರ ಸಮಸ್ಯೆಗಳ ಹೋರಾಟಕ್ಕೆ ಎಲ್ಲರೂ ಒಗ್ಗೂಡೋಣ: ಸಿದ್ರಾಮಪ್ಪ ಆಣದೂರೆ

Date:

  • ಕಮಲನಗರ ತಾಲೂಕಿನ ತೋರಣಾ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ
  • ಗ್ರಾಮ ಮಟ್ಟದಿಂದ ರೈತ ಸಂಘಟನೆ ಬಲವಾದರೆ ರೈತರ ಅನೇಕ ಸಮಸ್ಯೆಗಳು ಈಡೇರಲು ಸಾಧ್ಯ.

ಗ್ರಾಮ ಮಟ್ಟದಲ್ಲಿ ರೈತರನ್ನು ಒಗ್ಗೂಡಿಸಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಡಲು ಸಂಘಟನೆ ಬಲಪಡಿಸುವುದು ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ಹೇಳಿದರು.

- Advertisement -

ಕಮಲನಗರ ತಾಲೂಕಿನ ತೋರಣಾ ಗ್ರಾಮದಲ್ಲಿ ಆಯೋಜಿಸಿದ್ದ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ” ಜಿಲ್ಲೆ ಕಳೆದ ಎರಡು ವರ್ಷಗಳಿಂದ ಬರಗಾಲ ಎದುರಿಸುತ್ತಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅದರೂ ಸರ್ಕಾರ ಬರಪೀಡಿತ ಜಿಲ್ಲೆ ಘೋಷಣೆಗೆ ಹಿಂದೇಟು ಹಾಕುತ್ತಿದೆ. ನಾವೆಲ್ಲರೂ ಗ್ರಾಮ ಮಟ್ಟದಿಂದ ಸಂಘಟಿಸಿ ಹೋರಾಡಲು ಸಜ್ಜಾಗಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದರ ಮಾತನಾಡಿ, ಜಿಲ್ಲೆಯ ರೈತರು ಬರಗಾಲ ಸೇರಿದಂತೆ ಅನೇಕ ಸಮಸ್ಯೆಗಳು ಎದುರಿಸುತ್ತಿದ್ದಾರೆ. ಸಮಸ್ಯೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ರೈತ ಸಂಘ ಪ್ರತಿಭಟನೆಗಳು ನಡೆಸುತ್ತಲೇ ಇದೆ. ರೈತ ವಿವಿಧ ಬೇಡಿಕೆಗಳ ಪರಿಹಾರಕ್ಕೆ ಹೋರಾಟ ನಡೆಸಲು ಸಂಘಟನೆ ಮುಖ್ಯವಾಗಿದೆ. ತಾಲೂಕು, ಗ್ರಾಮ ಮಟ್ಟದಲ್ಲಿ ಸಂಘಟನೆ ಬಲವಾದರೆ ಸಂಘಕ್ಕೆ ಇನ್ನಷ್ಟು ಸಾಮರ್ಥ್ಯ ಬರುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಸುನೀಲ ಸಿಗರೆ ಅಧ್ಯಕ್ಷತೆ ವಹಿಸಿದ್ದರು, ಕಮಲನಗರ ತಾಲೂಕು ಅಧ್ಯಕ್ಷ ಪ್ರವೀಣ ಕುಲಕರ್ಣಿ, ಔರಾದ ತಾಲೂಕು ಅಧ್ಯಕ್ಷ ಪ್ರಕಾಶ ಬಾವಗೆ, ವಿಶ್ವನಾಥ ಧರಣೆ, ಮನೋಹರ ಬಿರಾದರ, ಜನಾರ್ಧನ ಸಾವಗೆಕರ್‌, ಕಲ್ಲಪ್ಪ ದೇಶಮುಖ, ರಾಜಕುಮಾರ ಪಾಟೀಲ್‌ ಸೇರಿದಂತೆ ಇತರರಿದ್ದರು. ದಯಾನಂದ ರಾಜೋಳೆ ನಿರೂಪಿಸಿದರು, ಸಚಿನ ಸಿಂಧೆ ವಂದಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಕೆ: ಕೇಂದ್ರ ಸಚಿವ ಖೂಬಾ

ತೋರಣಾ ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ: ಉಮಾಕಾಂತ ಮಳಕೆರೆ (ಅಧ್ಯಕ್ಷ), ಕಿಶನರಾವ ವನಮಾರೆ, ಗೋಪಾಳರಾವ ಪಾಂಚವರೆ (ಉಪಾಧ್ಯಕ್ಷ), ಸಾಗರ ಸೂರ್ಯಕಾಂತ ( ಪ್ರಧಾನ ಕಾರ್ಯದರ್ಶಿ), ಪಂಡರಿನಾಥ ಪಾಂಚವಾರೆ ( ಸಹ ಕಾರ್ಯದರ್ಶಿ), ಹಾವಗಿರಾವ ಕೋರೆ ( ಖಜಾಂಚಿ) ಹಾಗೂ ಇತರರಿಗೆ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ ಎಂದು ಕಮಲನಗರ ತಾಲೂಕು ಅಧ್ಯಕ್ಷ ಪ್ರವೀಣ ಕುಲಕರ್ಣಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...