ಬೀದರ್‌ | ವಾಕ್‌ಥಾನ್ ಯಶಸ್ವಿಗೆ ಎಲ್ಲರೂ ಸಹಕರಿಸಿ : ಎಡಿಸಿ ಶಿವಕುಮಾರ ಶೀಲವಂತ

Date:

Advertisements

ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಬೀದರ ಜಿಲ್ಲಾಡಳಿತದ ವತಿಯಿಂದ ಬೀದರ ನಗರದಲ್ಲಿ ಆ.13 ರಂದು ರಾಷ್ಟ್ರೀಯ ಏಕತಾ ನಡಿಗೆ (ವಾಕ್‌ಥಾನ್) ಕಾರ್ಯಕ್ರಮ ಆಯೋಜಿಸಲಾಗಿದ್ದು‌, ಇದರ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹೇಳಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಾಕ್‌ಥಾನ್ ಅಂಗವಾಗಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼಆಗಸ್ಟ್ 13 ರಂದು ಬೆಳಿಗ್ಗೆ 7 ಗಂಟೆಗೆ ಬೀದರ ಕೋಟೆಯಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ರಾಷ್ಟ್ರೀಯ ಏಕತಾ ನಡಿಗೆ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ನಗರದ ವಿವಿಧ ಶಾಲಾ-ಕಾಲೇಜಿನ ವಿಧ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಸಿಬ್ಬಂದಿಗಳೊಂದಿಗೆ ವಾಕ್‌ಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕುʼ ಎಂದು ಹೇಳಿದರು.

Advertisements

ʼಸ್ವಾತಂತ್ರ‍್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಿದಂತೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಜ್ಞಾನ ಸುಧಾ, ಗುರುನಾನಕ್ ಕಾಲೇಜು, ಶಾಹೀನ್ ಕಾಲೇಜು, ಬಿ.ವಿ.ಬಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳಿಗೆ ಆಹ್ವಾನಿಸಲಾಗುವುದುʼ ಎಂದರು.

ʼಅಂದು ಬೆಳಿಗ್ಗೆ 6:30 ಗಂಟೆಗೆ ಮಕ್ಕಳನ್ನು ಬೀದರ್ ಕೋಟೆ ಆವರಣದಲ್ಲಿ ಕರೆ ತರಬೇಕು. ವಾಕ್‌ಥಾನ್ ಕೋಟೆಯಿಂದ ಆರಂಭವಾಗಿ ಮಹ್ಮದ್ ಗವಾನ್ ಮದರಸಾ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ ಹಾಗೂ ಹರಳಯ್ಯ ವೃತ್ತದ ಮಾರ್ಗವಾಗಿ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ನಡೆಯಲಿದೆ. ಶಾಲಾ ವಾಹನಗಳಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕರೆತಂದು, ಪುನಃ ತಮ್ಮ ಕಾಲೇಜುಗಳಿಗೆ ಅವರನ್ನು ಸುರಕ್ಷಿತವಾಗಿ ತಲುಪಿಸುವ ಜವಾಬ್ದಾರಿ ಆಯಾ ಕಾಲೇಜಿನ ಶಿಕ್ಷಕರು ನೋಡಿಕೊಳ್ಳಬೇಕುʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭರ್ಜಿಯ ಕೊನೆಗೆ ಪ್ರೀತಿಯ ಮುಳ್ಳು ಚುಚ್ಚಿದ ತಾಯಂದಿರು – ಆಲಿಸಲಿ ‘ಮಕ್ಕಳು’

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೆಘಣ್ಣನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಚಂದ್ರಕಾಂತ ಶಾಬಾದಕರ್, ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೆಶಕಿ ಸುರೇಖಾ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ್ ಗಂಧಗೆ, ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ ಸುವರ್ಣ ಸೇರಿದಂತೆ ಪ್ರಮುಖರಾದ ವಿರೂಪಾಕ್ಷ ಗಾದಗಿ, ಶಿವಶಂಕರ ಟೋಕರೆ ಹಾಗೂ ಜಿಲ್ಲಾ ಮಟ್ಟದ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X