ಸೋತಿದ್ದೇವೆ ಎಂದು ಧೈರ್ಯ ಕಳೆದುಕೊಳ್ಳದೇ ಜನರ ಜತೆ ನಿಂತು ಕೆಲಸ ಮಾಡೋಣ: ಹೆಚ್‌ ಡಿ ದೇವೇಗೌಡ

Date:

  • 19 ಸೀಟು ಗೆದ್ದಿದ್ದೇವೆ ಎಂಬ ಆತಂಕದಲ್ಲೇ ಕುಳಿತುಕೊಳ್ಳಬೇಡಿ: ಕಿವಿಮಾತು
  • ಮುಂದಿನ ಚುನಾವಣೆಯಲ್ಲಿ 119 ಸೀಟು ಗೆಲ್ಲುವ ದಿಕ್ಕಿನತ್ತ ಕೆಲಸ ಮಾಡೋಣ

“ಸೋತಿದ್ದೇವೆ ಎಂದು ಯಾರೂ ಧೈರ್ಯ ಕಳೆದುಕೊಳ್ಳಬೇಡಿ. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಜನರ ಜತೆ ನಿಂತು ಕೆಲಸ ಮಾಡೋಣ. ಪ್ರಾಮಾಣಿಕತೆ, ಬದ್ಧತೆ, ಅಚಲತೆಯಿಂದ ದುಡಿದರೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಕಷ್ಟವಲ್ಲ” ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಬುಧವಾರ ಕರೆದಿದ್ದ ಸಭೆಯಲ್ಲಿ ಪಕ್ಷದ ನೂತನ ಶಾಸಕರಿಗೆ ಧೈರ್ಯ ತುಂಬಿ ಮಾತನಾಡಿದರು.

‘ಸದನದಲ್ಲಿ ಸಂಖ್ಯಾಬಲ ಕಡಿಮೆ ಇದೆ ಎಂದು ಎದೆಗುಂದಬೇಡಿ. ಹಿಂದಿನ ಲೋಕಸಭೆಯಲ್ಲೂ ನಾನು ನಮ್ಮ ಪಕ್ಷದ ಪರವಾಗಿ ಒಬ್ಬನೇ ಇದ್ದೆ. ಈಗಲೂ ನಮಗೆ ಒಬ್ಬರೇ ಸದಸ್ಯರಿದ್ದಾರೆ. ಹಾಗಂತ ನಮ್ಮ ಹೋರಾಟದ ಕಿಚ್ಚು ಕಡಿಮೆ ಆಗಿದೆಯಾ?’ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“19 ಸೀಟು ಗೆದ್ದಿದ್ದೇವೆ ಎಂಬ ಆತಂಕದಲ್ಲೇ ಕುಳಿತುಕೊಳ್ಳಬೇಡಿ. ಮುಂದಿನ ಚುನಾವಣೆಯಲ್ಲಿ 119 ಸೀಟು ಗೆಲ್ಲುವ ದಿಕ್ಕಿನತ್ತ ಕೆಲಸ ಮಾಡೋಣ. ನಾನು ಬದುಕಿರುವ ತನಕ ಪಕ್ಷಕ್ಕಾಗಿ ದುಡಿಯುತ್ತೇನೆ” ಎಂದು ಹೇಳಿದರು.

“ವಿವಿಧ ಚುನಾವಣೆಗಳು ನಮ್ಮ ಮುಂದಿವೆ. ಲೋಕಸಭೆ ಚುನಾವಣೆ ಕೂಡ ಬರುತ್ತದೆ. ಈಗಿನಿಂದಲೇ ನಾವು ತಯಾರಾಗಬೇಕು. ನಿಮ್ಮ ಜತೆ ನಾನು, ಕುಮಾರಸ್ವಾಮಿ ಇರುತ್ತೇವೆ. ಹೆದರಿ ಹಿಂದೆ ಸರಿಯುವ ಪ್ರಶ್ನೆ ಇಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು: ಅಂಡರ್‌ಪಾಸ್, ಫ್ಲೈಓವರ್, ರಸ್ತೆ ಗುಂಡಿ; ಹೆಜ್ಜೆ ಹೆಜ್ಜೆಗೂ ಕಾಡುವ ಸಾವು!

“ಚುನಾವಣೆಯಲ್ಲಿ ನಾನು ಕೂಡ ಸೋಲು-ಗೆಲುವು ಕಂಡಿರುವೆ. ಸೋತಾಗ ಹೆದರಿ ಮನೆ ಸೇರಿಕೊಂಡಿಲ್ಲ, ಗೆದ್ದಾಗ ಬೀಗಿಲ್ಲ. ಎಲ್ಲ ಸಮಯದಲ್ಲೂ ಶ್ರದ್ಧೆ, ವಿನಯದಿಂದ ಜನರ ಕೆಲಸ ಮಾಡಿದ್ದೇನೆ” ಎಂದು ತಿಳಿಸಿದರು.

“1962ರಲ್ಲಿ ಪಕ್ಷೇತರ ಶಾಸಕನಾಗಿ ಗೆದ್ದುಬಂದು ಈ ನೆಲ ಜಲಕ್ಕಾಗಿ ಹೋರಾಟ ನಡೆಸಿದವನು ನಾನು. ಒಬ್ಬನೇ ಶಾಸಕ ಎಂದು ನಾನು ಕೈಕಟ್ಟಿ ಕೂತಿದ್ದರೆ ಕಾವೇರಿ ನೀರಿನ ಸದ್ಬಳಕೆ ಸಾಧ್ಯ ಆಗುತ್ತಿತ್ತಾ? ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ತಲೆ ಎತ್ತುತ್ತಿದ್ದವಾ? ಮನಸ್ಸಿಟ್ಟು ಯೋಚನೆ ಮಾಡಿ” ಎಂದು ಹುರಿದುಂಬಿಸಿದರು.

ಎಚ್‌ ಡಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ, ಜಿ ಟಿ ದೇವೇಗೌಡ, ಟಿ ಎ ಶರವಣ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ...

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ...

ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ, ಹೀಗಾಗಿ ಜೋಶಿ ವಿರುದ್ಧ ಸ್ಪರ್ಧೆ: ಯತ್ನಾಳ್ ಆರೋಪ

ದಿಂಗಾಲೇಶ್ವರ ಸ್ವಾಮೀಜಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಹೀಗಾಗಿಯೇ ಅವರು ಧಾರವಾಡ ಲೋಕಸಭಾ...

ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ...