ರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Date:

ನಾಡಿನ ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

- Advertisement -

ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹಿರಿಯ ಸಾಹಿತಿ ಡಾ.ಕೆ ಮರುಳಸಿದ್ದಪ್ಪ ಅವರು ಮಾತನಾಡಿ, ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು ಆತಂಕ, ಮುಜುಗರದಿಂದ ಬದುಕುವ ಪರಿಸ್ಥಿತಿ ಉಂಟಾಗಿದೆ ಎಂದು ಹಲವು ಪ್ರಕರಣಗಳನ್ನು ಉದಾಹರಿಸಿದರು.

ಕುಂ. ವೀರಭದ್ರಪ್ಪ, ಡಾ. ವಸುಂಧರಾ ಭೂಪತಿ, ಬಂಜಗೆರೆ ಜಯಪ್ರಕಾಶ್, ಅವರುಗಳಿಗೆ ಅತಿ ಹೆಚ್ಚು ಬೆದರಿಕೆಗಳು ಬಂದಿವೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದ, ವಾತಾವರಣ ಸೃಷ್ಟಿಯಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಅವರಿಗೆ ಒದಗಿದ ಗತಿ ಒದಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಬೆದರಿಕೆ ಪತ್ರಗಳ ಬಗ್ಗೆ ಒಂದು ತಂಡ ರಚಿಸಿದ್ದು, ಇನ್ನಷ್ಟು ಪರಿಣಾಮಕಾರಿಯಾಗಿರುವ, ವೃತ್ತಿಪರವಾಗಿರುವ ಖಡಕ್ ಅಧಿಕಾರಿಗಳ ಪೊಲೀಸ್ ತಂಡವನ್ನು ರಚಿಸಬೇಕು ಎಂದರು.

ಸಾರ್ವಜನಿಕ ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಮಾತ್ರ ಸೀಮಿತಗೊಳಿಸಿದ್ದು, ಇತರೆಡೆ ಪ್ರತಿಭಟನೆ ಮಾಡಲು ಇರುವ ನಿಷೇಧವನ್ನು ತೆಗೆಯಬೇಕೆಂದು ಮನವಿ ಮಾಡಿದರು.

ಈವರೆಗೆ ಸುಮಾರು 15 ಪತ್ರಗಳು ಬಂದಿವೆ. ಈ ಸರ್ಕಾರ ಬಂದ ನಂತರ ಮೂರು ಪತ್ರಗಳು ಬಂದಿವೆ. ಒಂದೇ ರೀತಿಯ ಒಕ್ಕಣೆ ಇರುವ ಪತ್ರಗಳು ಬಂದಿವೆ ಎಂದು ಸಾಹಿತಿ ಡಾ. ವಸುಂಧರಾ ಭೂಪತಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸಂಸದ ತೇಜಸ್ವಿ ಸೂರ್ಯನನ್ನು ತರಾಟೆಗೆ ತೆಗೆದುಕೊಂಡ ರೈತ ಮುಖಂಡರು; ಕಾಲ್ಕಿತ್ತ ಸಂಸದ

ರಾಜ್ಯ ಶಿಕ್ಷಣ ನೀತಿ
ರಾಜ್ಯಕ್ಕೆ ಸೂಕ್ತವಾದ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ. ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಖಾಸಗಿ ವಲಯದಲ್ಲಿ ಹೆಚ್ವಿನ ಉದ್ಯೋಗಾವಕಾಶಗಳಿರುವುದರಿಂದ ಹೆಚ್ಚಿನವರು ಆಂಗ್ಲ ಮಾಧ್ಯಮಕ್ಕೆ ಮೊರೆ ಹೋಗುತ್ತಾರೆ. ಇದಕ್ಕೆ ಒಂದು ಮಧ್ಯಮ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಮರುಳಸಿದ್ದಪ್ಪ ತಿಳಿಸಿದರು.

ಸೌಜನ್ಯ ಪ್ರಕರಣ

ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಸಾಹಿತಿಗಳು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಮರುತನಿಖೆ ಕೈಗೊಳ್ಳುವಂತೆ ಭಾರತ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯಬಹುದು. ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತನಾಡಿದ್ದು, ಅವರ ಪೋಷಕರು ಮೇಲ್ಮನವಿ ಸಲ್ಲಿಸಬೇಕು ಎಂದು ವಿವರಿಸಿದರು.

ಹಿರಿಯ ಸಾಹಿತಿಗಳಾದ ಡಾ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ. ವಸುಂಧರಾ ಭೂಪತಿ, ಡಾ. ವಿಜಯಮ್ಮ, ದಿನೇಶ್ ಅಮೀನ್ ಮಟ್ಟು, ರುದ್ರಪ್ಪ ಹನಗವಾಡಿ, ಎಲ್‌ ಎನ್ ಮುಕುಂದರಾಜ್ ಸೇರಿ ಹಲವು ಲೇಖಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...