ಲಿಂಗಸೂಗೂರು | ನೈಜ 49 ಅಲೆಮಾರಿಗಳ ಒಳಮೀಸಲಾತಿ ಹೋರಾಟ: ರಾಜ್ಯಾಧ್ಯಕ್ಷ ಬಸವರಾಜ ಹಟ್ಟಿ

Date:

ರಾಜ್ಯ ಸರ್ಕಾರ ಘೋಷಿಸಿದ ಒಳಮೀಸಲಾತಿ ಇನ್ನೂ ಸರಿಯಾಗಿ ಜಾರಿಯಾಗಿಲ್ಲ. ಆ ಕಾರಣಕ್ಕಾಗಿ ಆದರೂ ಅಲೆಮಾರಿಗಳಿಗಾಗಿ ಮಾತ್ರ ಇದ್ದ 1% ಒಳಮೀಸಲನ್ನು ಸಿ ಗುಂಪಿನೊಂದಿಗೆ ವಿಲೀನಗೊಳಿಸಿದ್ದನ್ನು ವಿರೋಧಿಸಿ, 49 ಹಾಗೂ ಹೆಚ್ಚುವರಿಯಾಗಿ ಸೇರ್ಪಡೆಯಾಗಿರುವ 10 ಅಂದರೆ ಒಟ್ಟು 59 ಅಲೆಮಾರಿ ಸಮುದಾಯಗಳಿಗೆ ಆ 1% ಮೀಸಲಾತಿಯನ್ನು ಕೂಡಲೇ ಪರಿಷ್ಕೃತಗೊಳಿಸಿ ಪ್ರತ್ಯೇಕಗೊಳಿಸಲು ಮುಂದಾಗಬೇಕಾಗಿದೆ. ಆದ್ದರಿಂದ ತಾಲೂಕು ಮಟ್ಟದ ಬೃಹತ್ ಹೋರಾಟವನ್ನು ಲಿಂಗಸೂಗೂರು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಲೆಮಾರಿ ಜಾಗೃತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಹಟ್ಟಿ ತಿಳಿಸಿದರು.

- Advertisement -

ರಾಯಚೂರು ಜಿಲ್ಲೆಯ ಲಿಂಗಸೂಗೂರು ನಗರದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿ, “ಜನಾಂದೋಲನಕ್ಕೆ ಯಾವುದೇ ಸರ್ಕಾರವಾದರೂ ತಲೆ ಬಾಗಲೇಬೇಕು. ಚಳವಳಿಯೇ ಅಂತಿಮ ದಾರಿಯಾಗಿರುವುದರಿಂದ ಅಲೆಮಾರಿ ನಿಯೋಗ ಈಗಾಗಲೇ ದೆಹಲಿ ಮಟ್ಟದಲ್ಲಿ ದೌಢಾಯಿಸಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಗಮನಕ್ಕೆ ತಂದರೂ ಕೂಡ ಈವರೆಗೆ ಸ್ಪಷ್ಟ ನಿರ್ಧಾರಕ್ಕೆ ಬಂದು ಒಳಮೀಸಲಾತಿ ಘೋಷಿಸದೇ ಮೀನಾಮೇಷ ಎಣಿಸುತ್ತಿರುವ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನ್ಯಾಯ ಸಿಗುವವರೆಗೂ ಚಳವಳಿ ಮುಂದುವರೆಸುತ್ತೇವೆ. 49 ನೈಜ ಅಲೆಮಾರಿ ಜನಾಂಗಗಳಿಗಾಗಿ ಮಾತ್ರ ಪ್ರತ್ಯೇಕ ನಿಗಮ ಸ್ಥಾಪಿಸಬೇಕು ಹಾಗೂ ಮೀಸಲಾತಿ ಪ್ರಮಾಣ ಹೆಚ್ಚಿಸಿದರೆ ʼಸಿʼ ಗುಂಪಿನಿಂದ 1% ಹಾಗೂ ಹೆಚ್ಚುವರಿಯಾಗಿ 1% ಸೇರಿಸಿ ಒಟ್ಟು 2% ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ನಮಗೆ ನೈತಿಕವಾಗಿ ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಿಲ್‌ ಪಾವತಿಯಲ್ಲಿ ವಿಳಂಬ ; ಎನ್‌ಡಿ ವಡ್ಡರ್ ಕಂಪನಿ ವಿರುದ್ದ ಗುತ್ತಿಗೆದಾರರ ಅನಿರ್ದಿಷ್ಟಾವಧಿ ಧರಣಿ

“ಅಲೆಮಾರಿಗಳ ನ್ಯಾಯಬದ್ಧ ಹೋರಾಟಕ್ಕೆ ಜಯವಾಗಲಿ. ಜನರನ್ನು ಜಾಗೃತಗೊಳಿಸುವುದು ಚಳವಳಿಯಿಂದ ಮಾತ್ರ ಸಾಧ್ಯ. ಈಗ ಚಳವಳಿಯೇ ನಮಗಿರುವ ಒಂದೇ ಒಂದು ಕೊನೆಯ ದಾರಿ. ಹಾಗಾಗಿ ಹೋರಾಟದ ಕಾವು ಆರದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಸಮುದಾಯದ ಮೇಲಿದೆ. ಈ ಹೋರಾಟಕ್ಕೆ ತಾಲೂಕಿನ ಎಲ್ಲ ಹೋರಾಟಗಾರರು, ಚಳವಳಿಕಾರರು ಭಾಗವಹಿಸಿ ಬೆಂಬಲಿಸಬೇಕು” ಎಂದು ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...