ಲಿಂಗಸೂಗೂರು | ವಸತಿ ನಿಲಯದಲ್ಲಿ ಅವ್ಯವಸ್ಥೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

Date:

ಬಾಲಕರ ವಸತಿ ನಿಲಯದಲ್ಲಿ ಅಸ್ವಚ್ಚತೆ, ಕುಡಿಯುವ ನೀರು ಹಾಗೂ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ನಿಲಯದ ಶೌಚಾಲಯಗಳು ಸ್ವಚ್ಛತೆ ಇಲ್ಲದೆ ದುರ್ಗಂಧ ಬೀರುತ್ತಿದ್ದು, ವಿದ್ಯಾರ್ಥಿಗಳಿಗೆ ಅನಾರೋಗ್ಯದ ಭೀತಿ ಹೆಚ್ಚಾಗಿದೆ.

- Advertisement -

ಲಿಂಗಸೂಗೂರು ನಗರದ ಕರಡಕಲ್‌ ಗ್ರಾಮದಲ್ಲಿರುವ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯದಲ್ಲಿ ಸುಮಾರು 150 ವಿದ್ಯಾರ್ಥಿಗಳಿದ್ದಾರೆ. ಹಲವು ದಿನಗಳಿಂದ ವಸತಿ ನಿಲಯದ ಮಕ್ಕಳು ವಸತಿ ನಿಲಯದಲ್ಲಿ ಶೌಚಾಲಯ ಕೋಣೆಗಳು, ಸ್ನಾನದ ಕೋಣೆಗಳು ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಗಂಭೀರ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಬಗ್ಗೆ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಮುಖಂಡ ದುರುಗಪ್ಪ ಮಾತನಾಡಿ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಿಲಯದಲ್ಲಿ ಅಸ್ವಚ್ಚತೆಯಿಂದ ಶೌಚಾಲಯಗಳು ಇರುವುದರಿಂದ ವಿದ್ಯಾರ್ಥಿಗಳು ಸ್ನಾನಕ್ಕೆ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ. ಸ್ನಾನದ ಕೋಣೆಗಳಲ್ಲಿಯೂ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

WhatsApp Image 2026 02 09 at 6.45.19 PM

ವಸತಿ ನಿಲಯದ ಅಸ್ತವ್ಯಸ್ತತೆ ಕುರಿತು ಮೇಲಾಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರೂ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲ. ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದು, ಮಕ್ಕಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಅವರು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ನಿಗದಿತ ಸ್ಥಳ ಬದಲಾಗಿ ಬೇರೆಡೆ ಲ್ಯಾಂಡ್; ಸಿಎಂ–ಸಚಿವರ ಹೆಲಿಕಾಪ್ಟರ್ ಗೊಂದಲ

ವಸತಿ ನಿಲಯದ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ನಿಲಯದ ವಾರ್ಡನ್‌ ಅವರನ್ನು ಅಮಾನತುಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿಲಯದ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ನೂತನ ಜಿಲ್ಲಾಸ್ಪತ್ರೆ ಸಿದ್ಧ, ಉದ್ಘಾಟನೆಗೆ ಮೀನಮೇಷ, ಹೋರಾಟದ ಎಚ್ಚರಿಕೆ

ಹಲವು ವರ್ಷಗಳ ನಿರೀಕ್ಷೆಯ ಬಳಿಕ ನಿರ್ಮಾಣಗೊಂಡಿರುವ ಉಡುಪಿ ನೂತನ ಜಿಲ್ಲಾ ಆಸ್ಪತ್ರೆ...

ವಿಜಯಪುರ | ಜನಗಣತಿಯಲ್ಲಿ 21 ವಿಧದ ಅಂಗವೈಕಲ್ಯ ದಾಖಲಿಸಲು ಆಗ್ರಹ

2027ರ ಜನಗಣತಿಯಲ್ಲಿ ಅಂಗವಿಕಲರ ನಿಖರ ಸಂಖ್ಯೆ ಮಾತ್ರವಲ್ಲದೆ, ಅಂಗವಿಕಲರ ಹಕ್ಕುಗಳ ಕಾಯ್ದೆ-2016ರಡಿ...