ಲಿಂಗಸೂಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ಆದೇಶ ರದ್ದುಗೊಳಿಸಲು ಪ್ರತಿಭಟನೆ

Date:

ಲಿಂಗಸೂಗೂರು ತಾಲ್ಲೂಕಿನ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರು ತಾಲ್ಲೂಕಿಗೆ ಸ್ಥಳಾಂತರಕ್ಕೆ ಹೊರಡಿಸಿರುವ ಆದೇಶವನ್ನು ಕೂಡಲೇ ರದ್ದುಪಡಿಸಲು ಸ್ಥಳೀಯ ಶಾಸಕ ಮಾನಪ್ಪ ವಜ್ಜಲ ಅವರು ಬೆಳಗಾವಿ ಅಧಿವೇಶನದಲ್ಲಿ ಮಾತನಾಡಬೇಕು ಎಂದು ಆಗ್ರಹಿಸಿ ಲಿಂಗಸೂಗೂರು ತಾಲೂಕು ಅಭಿವೃದ್ಧಿ ಸಮಿತಿ ವತಿಯಿಂದ ಶಾಸಕ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಸ್ಥಳಾಂತರ ವಿರೋಧಿಸಿ ಸುಮಾರು ೧೫ ದಿನಗಳಿಂದ ಹೋರಾಟ ನಡೆಯುತ್ತಿದ್ದರು ಇತ್ತ ಕಡೆ ಗಮನಹರಿಸುತ್ತಿಲ್ಲ ಮತ್ತು ‎ಸ್ಥಳೀಯರಾದ ಮಾಜಿ ಸಚಿವರು ಹಾಗೂ ಮಾಜಿ ಸಂಸದ ರಾಜಾ ಅಮರೇಶ್ವರ ನಾಯಕ ಈ ಕ್ಷೇತ್ರದಿಂದಲೇ ಸಚಿವರು ಸಂಸದರಾಗಿದ್ದು, ಇವರ ಇಚ್ಚಾಶಕ್ತಿ ಕೊರತೆಯಿಂದ ಲಿಂಗಸುಗೂರಿನ ಒಂದೊಂದೇ ಕಚೇರಿಗಳು ಸ್ಥಳಾಂತರವಾಗುತ್ತಿವೆ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಲಿಂಗಸೂಗೂರು ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸ್ಥಳೀಯರಾದ ಹಾಲಿ ವಿಧಾನ ಪರಿಷತ್ತು ಸದಸ್ಯರು ತಮ್ಮ ಸ್ವಅಭಿವೃದ್ಧಿಗೆ ಹೆಚ್ಚು ಹೊತ್ತು ನೀಡುತ್ತಿದ್ದಾರೆ. ವಿನಹ ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನಹರಿಸುತ್ತಿಲ್ಲ. ಈಗಾಗಲೇ ತಾಲೂಕಿನ ಮಂಜೂರಾತಿ ಹಂತದಲ್ಲಿದ್ದ ಪ್ರಾದೇಶಿಕ ಸಾರಿಗೆ ಕಚೇರಿ ,ಕೆಪಿಟಿಸಿಎಲ್‌ ಕಚೇರಿ ಹಾಗೂ ಜಿಲ್ಲಾ ನ್ಯಾಯಾಲಯ ಸೇರಿ ತಾಲೂಕಿನ ಒಂದೊಂದಾಗಿ ಕಚೇರಿಗಳು ಸ್ಥಳಾಂತರವಾಗುತ್ತಿವೆ. ತಾಲೂಕಿನ ಅಭಿವೃದ್ಧಿ ಶೂನ್ಯ, ತಮ್ಮಿಂದಾಗಿ ಕ್ಷೇತ್ರ ಕುಂಠಿತಗೊಂಡಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು
‎
‎ಒಂದು ವಾರದಲ್ಲಿ ಕೃಷಿ ನಿರ್ದೇಶಕರ ಕಚೇರಿ-2 ಸ್ಥಳಾಂತರ ಆದೇಶವನ್ನು ರದ್ದುಪಡಿಸದಿದ್ದರೆ ಮುಂದಿನ ದಿನಗಳಲ್ಲಿ  ತೀವ್ರ ಹೋರಾಟ ನಡೆಸಲಾಗುವುದು ಎಂದು ಹೋರಾಟ ಸಮಿತಿ ಎಚ್ಚರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳ ಮೀಸಲಾತಿ ಜಾಥಾ ತಡೆ; ಪ್ರತಿಭಟನಾಕಾರರ ಬಂಧನ ಖಂಡಿಸಿ ಪ್ರತಿಭಟನೆ

ಈ ವೇಳೆ ಸಮಿತಿಯ ಮುಖಂಡರಾದ ರಮೇಶ ವೀರಾಪೂರು, ಶಿವಪುತ್ರಪ್ಪಗೌಡ, ಹಾಜಿಬಾಬು ಕಟ್ಟಿಮನಿ, ಬಾಬಾಜಾನಿ  ಇದ್ದರು.     
‎

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...