ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತಾಗಿ ಕೆಟ್ಟ ಪದ ಬಳಸಿರುವ ಸಿ ಟಿ ರವಿ ಸದಸ್ಯತ್ವ ವಜಾಗೊಳಿಸುವಂತೆ ಲಿಂಗಾಯತ ಪಂಚಮಸಾಲಿ ಮುಖಂಡರ ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಲಿಂಗಾಯತ ಪಂಚಮಸಾಲಿ ಸಮುದಾಯದ ಮುಖಂಡರು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಕುರಿತಾಗಿ ಕೆಟ್ಟ ಪದ ಬಳಸಿದ್ದು ಖಂಡನೀಯವ. ತಕ್ಷಣವೇ ಸಿ.ಟಿರವಿಯವರ ಸದಸ್ಯತ್ವ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಮುದಾಯದ ಮುಖಂಡರಾದ ಗುಂಡು ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತದಲ್ಲಿ ಮಹಿಳೆಯರಿಗೆ ಅಪಾರವಾದ ಗೌರವವಿದೆ. ಹೆಣ್ಣು ಮಕ್ಕಳಿಗೆ ದೈವೀ ಸ್ಥಾನ ಕೊಡಲಾಗಿದೆ. ಆದರೆ ಸಿ.ಟಿ. ರವಿ ಅವರು ಅವಾಚ್ಯ ಶಬ್ದ ಬಳಸಿ, ಇಡೀ ಮಾನವ ಕುಲಕ್ಕೆ ಅಪಮಾನ ಮಾಡಿದ್ದು, ನಮ್ಮ ಸಮುದಾಯ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡ ಅಡಿವೇಶ ಇಟಗಿ ಮಾತನಾಡಿ, ‘ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ನೀಡಿದ ಹೇಳಿಕೆ ಖಂಡಿಸಿ, ನಗರದಲ್ಲಿ ಡಿ. 21ರಂದು ಹೆಬ್ಬಾಳಕರ ಅಭಿಮಾನಿ ಬಳಗದವರು ಪ್ರತಿಭಟನೆ ಮಾಡಲಿದ್ದೇವೆ ಎಂದು ತಿಳಿಸಿದರು.
