ಚಿಕ್ಕಬಳ್ಳಾಪುರ | ಗೂಡ್ಸ್‌ ವಾಹನದಲ್ಲಿ ಸಾಗಿಸುತ್ತಿದ್ದ ₹36 ಲಕ್ಷ ಮೌಲ್ಯದ ಮದ್ಯ ವಶ

Date:

  • ವಾಹನ ಬಿಟ್ಟು ಪರಾರಿಯಾಗಿರುವ ಚಾಲಕ, ನಿರ್ವಾಹಕ
  • ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ಮದ್ಯ  

ಚಿಕ್ಕಬಳ್ಳಾಪುರದಲ್ಲಿ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹36 ಲಕ್ಷ ಮೌಲ್ಯದ ಮದ್ಯದ ಬಾಟಲಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಣ, ಉಡುಗೊರೆ, ಮದ್ಯ ನೀಡುವುದನ್ನು ತಡೆಯಲು ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದ್ದಾರೆ.

ಮತದಾರರಿಗೆ ಹಂಚುವ ಉದ್ದೇಶದಿಂದ ಕಾರ್ಗೋ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಪಟ್ಟಣದ ಮುಖ್ಯರಸ್ತೆಯಲ್ಲಿ ಬರುತ್ತಿದ್ದ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ರಟ್ಟಿನ ಪೆಟ್ಟಿಗೆಗಳಲ್ಲಿ ಮದ್ಯದ ಬಾಟಲಿಗಳನ್ನು ಇಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ. ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವಾಹನ ಚಾಲಕ ಮತ್ತು ಕ್ಲೀನರ್ ಪರಾರಿಯಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ನಾಮಪತ್ರ ಸಲ್ಲಿಕೆವರೆಗೂ ಮತದಾರರ ಪಟ್ಟಿ ಪರಿಷ್ಕರಿಸಬಹುದು: ಹೈಕೋರ್ಟ್‌

ಬಳಿಕ ಅಬಕಾರಿ ಇಲಾಖೆ ಅಧಿಕಾರಿಗಳು ವಾಹನ ಮತ್ತು ಅಕ್ರಮವಾಗಿ ಸಾಗಿಸುತ್ತಿದ್ದ ₹36.18 ಲಕ್ಷ ಮೌಲ್ಯದ ಮದ್ಯದ ಬಾಟಲಿಗಳು ಮತ್ತು ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಯಡಿಯೂರಪ್ಪ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಶಾಸಕ ಚಂದ್ರಪ್ಪ

ರಘು ಚಂದನ್‌ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ...

ಧಾರವಾಡ | ‘ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆಗೂ, ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ’

ಮಾರ್ಚ್ 27ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...