ವಿಜಯನಗರ | ಸಾಹಿತ್ಯ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ : ಲಿಂಗರಾಜ

Date:

Advertisements

ವರ್ತಮಾನದ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ ಎಂದು ಕವಿ, ಕಥೆಗಾರ ಹಾವೇರಿಯ ಲಿಂಗರಾಜ ಸೊಟ್ಟಪ್ಪನವರ ಅಭಿಪ್ರಾಯಪಟ್ಟರು.

ಹೂವಿನ ಹಡಗಲಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಸಿಂಚನ ಪ್ರಕಾಶನ, ಮೇ ಸಾಹಿತ್ಯ ಮೇಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2021-22ನೇ ಸಾಲಿನ ಸಿಂಚನ ಕಾವ್ಯ ಪ್ರಶಸ್ತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ʼಪ್ರಸ್ತುತ ದಿನಗಳಲ್ಲಿ ಪ್ರಶಸ್ತಿಗಾಗಿಯೇ ಬರೆಯುವ ಒಂದು ವಲಯ ಹುಟ್ಟಿಕೊಂಡಿದೆ. ಬಹುಮಾನದ ಮೊತ್ತ ಹೆಚ್ಚಿಸಿ ಅದರ ಮೌಲ್ಯವನ್ನು ಕಡಿಮೆ ಮಾಡುತ್ತಿದ್ದಾರೆ. ಲಾಬಿ, ಸ್ವಜನಪಕ್ಷಪಾತ ಶಿಫಾರಸ್ಸು ಪ್ರಮಾಣ ಸಾಹಿತ್ಯದಲ್ಲಿ ಹೆಚ್ಚುತ್ತಿದೆ. ಬರೆದಿರುವ ಕಥೆ, ಕವಿತೆಗಳಿಗೆ ಓದುಗರೇ ಆಸ್ತಿ ಎನ್ನುವ ಭಾವದೊಂದಿಗೆ ಜನರ ನೋವು ಸಂಕಷ್ಟಗಳಿಗೆ ಲೇಖಕರು ಸ್ಪಂದಿಸಬೇಕು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸುತ್ತದೆʼ ಎಂದು ಹೇಳಿದರು.

Advertisements

ಇದೇ ಸಂದರ್ಭದಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ತುಂಗಭದ್ರಾ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ʼಸೇವಂತಿಗೆʼ ಕೃಷಿಯಲ್ಲಿ ಯಶಸ್ಸು ಕಂಡ ಯುವ ರೈತ : ತಿಂಗಳಿಗೆ ಒಂದು ಲಕ್ಷ ಆದಾಯ!

ಕಾರ್ಯಕ್ರಮದಲ್ಲಿ ಸಾಹಿತಿ ಪ್ರಕಾಶ್ ಮಲ್ಕಿಒಡೆಯರ್, ಮಲ್ಲಿಗೆ ಪ್ರಕಾಶನದ ಖಾದರ ಬಾಷಾ, ಭಾರತೀಯ ಸರ್ವಧರ್ಮ ರಕ್ಷಣಾ ವೇದಿಕೆಯ ಮುಖಂಡ ಖಾಜಾ ಹುಸೇನ್, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಜುನಾಥ ಬೋವಿ, ಸಿಂಚನ ಪ್ರಕಾಶನದ ಸವಿತಾ ಅಂಗಡಿ ಹಾಗೂ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X