ಉತ್ತರ ಕನ್ನಡ | ಸಾಲಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನ ಅಪಹರಣ

Date:

ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ.

- Advertisement -

ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ ಮಾಡುತ್ತಿದ್ದ ಮುಂಡಗೋಡದ ಜಮೀರ್ ದರ್ಗಾವಲೆ ಎಂಬವರನ್ನು ಗುಂಪೊಂದು ಅಪರಿಸಿತ್ತು. ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಜಮೀರ್‌ನನ್ನು ರಕ್ಷಿಸಿದ್ದಾರೆ. ಈವರೆಗೆ 13 ಮಂದಿ ಆರೋಪಿಗಳನ್ನು ಬಂಧಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಜಮೀರ್, 1 ಲಕ್ಷ ರೂ. ಸಾಲ ಕೊಟ್ಟು, ತಿಂಗಳಿಗೆ 30,000 ರೂ. ಬಡ್ಡಿಯನ್ನೇ ಪಡೆಯುತ್ತಿದ್ದರು. ಇದು, ಬರೋಬ್ಬರಿ ತಿಂಗಳಿಗೆ 30% ಬಡ್ಡಿಯ ಲೆಕ್ಕವಾಗಿತ್ತು. ಸಾಲ ಕೊಡಲು ಸಾಲಗಾರರಿಂದ ಖಾಲಿ ಚೆಕ್‌ ಪಡೆಯುತ್ತಿದ್ದರು. ಬಡ್ಡಿ ಪಾವತಿಸದಿದ್ದರೆ, ಚೆಕ್‌ ಬೌನ್ಸ್‌ ಕೇಸ್‌ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ.

ಮೀಟರ್ ಬಡ್ಡಿ ವಸೂಲಿಗಾಗಿಯೇ ಜಮೀರ್ ಸುಮಾರು 150 ಮಂದಿ ಕೆಲಸಗಾರರನ್ನು ಇಟ್ಟುಕೊಂಡಿದ್ದರು. 30%ನಂತೆ ಮೀಟರ್ ಬಡ್ಡಿ ವಸೂಲಿ ಮಾಡುತ್ತಿದ್ದ ಜಮೀರ್, ಬಡ್ಡಿಯ ಹಣದಲ್ಲಿ 15% ತಾನು ಇಟ್ಟುಕೊಂಡು, ಉಳಿದ 15%ಅನ್ನು ವಸೂಲಿ ಮಾಡುತ್ತಿದ್ದ ಕೆಲಸಗಾರರಿಗೆ ಹಂಚುತ್ತಿದ್ದರು ಎಂದು ತಿಳಿದುಬಂದಿದೆ.

ಇತ್ತೀಚೆಗೆ, ಉತ್ತರ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಎಂ ನಾರಾಯಣ ನೇತೃತ್ವದಲ್ಲಿ ಪೊಲೀಸರು ಜಮೀರ್ ಮನೆ ಮೇಲೆ ದಾಳಿ ನಡೆಸಿದ್ದರು. ಆ ವೇಳೆ, 250ಕ್ಕೂ ಹೆಚ್ಚು ಖಾಲಿ ಚೆಕ್‌ಗಳು ಪತ್ತೆಯಾಗಿದ್ದವು ಎಂದು ವರದಿಯಾಗಿದೆ.

ಜಮೀರ್ ಅವರ ಮೀಟರ್‌ ಬಡ್ಡಿ ಸುಲಿಗೆಯಿಂದ ಬೇಸತ್ತಿದ್ದ ಗುಂಪೊಂದು ಜನವರಿ 9ರ ರಾತ್ರಿ ಜಮೀರ್ ಅವರನ್ನು ಅಪಹರಿಸಿತ್ತು. ಆತನ ಕುಟುಂಬಸ್ಥರಿಗೆ ಕರೆ ಮಾಡಿ, 32 ಲಕ್ಷ ರೂ.ಗೆ ಬೇಡಿಕೆ ಇಟ್ಟಿತ್ತು. ಆದಾಗ್ಯೂ, ಕುಟುಂಬಸ್ಥರು 18 ಲಕ್ಷ ರೂ.ಗಳನ್ನು ನೀಡಿದ್ದರು. ಬಳಿಕ, ಜಮೀರ್ ಅವರನ್ನು ಹಾವೇರಿಯಲ್ಲಿ ಬಿಟ್ಟು, ಗುಂಪು ಪರಾರಿಯಾಗಿತ್ತು.

ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...