ತಲಪಾಡಿ ಟೋಲ್ ಗೇಟ್‌ನಲ್ಲಿ ಸ್ಥಳೀಯ ಪ್ರಯಾಣಿಕರಿಗೆ ಮತ್ತೆ ಕಿರುಕುಳ: ಪ್ರಶ್ನಿಸಿದರೆ ಗೂಂಡಾ ಪಡೆಗಳ ಅಟ್ಟಹಾಸ

Date:

ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಟೋಲ್ ಗೇಟ್‌ನಲ್ಲಿ ಸ್ಥಳೀಯ ಪ್ರಯಾಣಿಕರಿಗೆ ಮತ್ತೆ ಕಿರುಕುಳ ಆರಂಭಗೊಂಡಿದ್ದು, ಈ ಬಗ್ಗೆ ಪ್ರಯಾಣಿಕರು ಪ್ರಶ್ನಿಸಿದರೆ ಗೂಂಡಾಗಿರಿ ಪ್ರದರ್ಶಿಸುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

- Advertisement -

ಮೊದಲು 5 ಕಿಲೋ ಮೀಟರ್ ವ್ಯಾಪ್ತಿಯ ಗಡಿ ಪ್ರದೇಶದ ಜನತೆಗೆ ಟೋಲ್ ಗೇಟ್‌ನಲ್ಲಿ ಉಚಿತ ಪ್ರಯಾಣವನ್ನು ಅನುಮತಿಸಲಾಗಿತ್ತು. ಆದರೆ ಬಳಿಕ ಕೇರಳದವರನ್ನು ಕಡೆಗಣಿಸಿ ಕರ್ನಾಟಕದ ತಲಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವವರಿಗೆ ಮಾತ್ರ ಉಚಿತ ಸೌಕರ್ಯವನ್ನು ನೀಡಲಾಗಿತ್ತು. ಈಗಲೂ ಅದೇ ಮುಂದುವರಿಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇರಳದ ಗಡಿ ಭಾಗದವರಿಗೆ ಒಂದು ನ್ಯಾಯ ಅದೇ ರೀತಿ ಕರ್ನಾಟಕದ ಗಡಿಯಲ್ಲಿರುವವರಿಗೆ ಇನ್ನೊಂದು ನ್ಯಾಯ. ಇದನ್ನು ಪ್ರಶ್ನಿಸುವಾಗಲೂ ಟೋಲ್ ಗೇಟ್ ಗೂಂಡಾ ಪಡೆಯನ್ನು ಮುಂದಿಟ್ಟು ಅಧಿಕಾರಿಗಳು ಗಡಿಭಾಗದ ಮಂಜೇಶ್ವರದವರಿಗೆ ಫಾಸ್ಟ್ ಟ್ಯಾಗ್ ಮಾಡಬೇಕು, ಇಲ್ಲವಾದರೆ ಲೋಕಲ್ ಪಾಸ್ ಮಾಡಬೇಕೆಂದು ಕಡ್ಡಾಯಗೊಳಿಸಿದ್ದರು.

₹340 ಪಾವತಿಸಿ ಲೋಕಲ್ ಪಾಸ್ ಮಾಡಿಸಿಕೊಂಡವರೂ ಕೂಡಾ ಟೋಲ್ ಗೇಟ್‌ನಲ್ಲಿ ಹಣ ಪಾವತಿಸಬೇಕಾದ ದುಃಸ್ಥಿತಿ ಎದುರಾಗಿದೆ. ಕೆಲ ದಿನಗಳ ಹಿಂದೆ ಈ ವಿಷಯವನ್ನು ಪೊಲೀಸ್ ಇಲಾಖೆಯ ಗಮನಕ್ಕೆ ತರಲು ಮುಂದಾಗಿ ವಾಹನಗಳನ್ನು ತಾಸುಗಟ್ಟಲೆ ಟೋಲ್ ಗೇಟ್‌ನಲ್ಲೇ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ಬಳಿಕ ಎಚ್ಚೆತ್ತ ಅಧಿಕಾರಿಗಳು ಇನ್ನು ಮುಂದಕ್ಕೆ ಈ ರೀತಿ ಸಂಭವಿಸುವುದಿಲ್ಲವೆಂದು ವಾಗ್ದಾನ ನೀಡಿದಾಗ ಸ್ಥಳೀಯರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿದ್ದರು. ಈಗ ಪುನಃ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರೂ ಸಹಕರಿಸಬೇಕು: ಸಚಿವ ಶರಣಪ್ರಕಾಶ್ ಪಾಟೀಲ್

“ಹಣ ಪಾವತಿಸಿ ಲೋಕಲ್ ಪಾಸ್ ಪಡೆದವರಿಂದಲೂ ಫಾಸ್ಟ್ ಟ್ಯಾಗ್ ಖಾತೆಯಿಂದ ಹಣ ಕಟ್ ಆಗುತ್ತಿದೆ. ಊರಿನ ಜನತೆಗೆ ಶಾಪವಾಗಿರುವ ಈ ಟೋಲ್ ಗೇಟ್‌ನಲ್ಲಿ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿರುವ ಇಲ್ಲಿಯ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...