ಮಂಡ್ಯ | 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಯಾಂಜೋ ಆಸ್ಪತ್ರೆಯ ಹಿಂಭಾಗದ ಸ್ಥಳ ನಿಗದಿ: ಸಚಿವ ಚಲುವರಾಯಸ್ವಾಮಿ

Date:

Advertisements

ಸಮ್ಮೇಳನಕ್ಕೆ ಸೂಕ್ತವಾದ ವಿಶಾಲವಾದ ಹಾಗೂ ಸುರಕ್ಷಿತವಾದ ಸ್ಥಳದ ಅಗತ್ಯವಿದ್ದು, ಅದಕ್ಕಾಗಿ ಹಲವಾರು ಸ್ಥಳಗಳನ್ನು ಪರಿಶೀಲಿಸಲಾಗಿದೆ. ಜೊತೆಗೆ ಸ್ಥಳ ಪರಿಶೀಲನೆಗೆ ತಾಂತ್ರಿಕ ಪರಿಣಿತರ ತಂಡದ ಮೂಲಕ ಜಾಗಗಳ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಂಡು, ಅಂತಿಮವಾಗಿ ಸಮ್ಮೇಳನ ನಡೆಸಲು ರಾಷ್ಟ್ರೀಯ ಹೆದ್ದಾರಿ-275 ಕ್ಕೆ ಹೊಂದಿಕೊಂಡಂತೆ ಇರುವ ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್‌ನ ಹಿಂಭಾಗದ ಜಾಗವನ್ನು ತಾಂತ್ರಿಕ ವರದಿಯನ್ವಯ ಡಿಸೆಂಬರ್ 20, 21 ಮತ್ತು 22 ರಂದು ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸೂಕ್ತವೆಂದು ಗುರುತಿಸಿ, ಅಂತಿಮಗೊಳಿಸಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾಡಳಿತ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಮನ್ವಯದೊಂದಿಗೆ ಸಮ್ಮೇಳನಕ್ಕೆ ಸಂಬಂಧಿಸಿದ ಎಲ್ಲಾ ಕಾರ್ಯ ಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನಕ್ಕೆ ಸ್ಥಳ ಆಯ್ಕೆಗೆ ಸಂಬಂಧಿಸಿದಂತೆ ಸಾಕಷ್ಟು ಅನಿಸಿಕೆಗಳು ವ್ಯಕ್ತವಾಗಿದ್ದವು. ಸೂಕ್ತವಾದ ಜಾಗವನ್ನು ಆಯ್ಕೆ ಮಾಡುವ ಸಂಬಂಧ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಕಷ್ಟು ಚರ್ಚಿಸಲಾಗಿತ್ತು. ಸಮಿತಿಗಳ ಸದಸ್ಯರು, ಶಾಸಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನೊಟ್ಟಿಗೆ ಚರ್ಚೆ ಮಾಡಿ ಜಾಗವನ್ನು ಅಂತಿಮಗೊಳಿಸಲಾಗಿದೆ ಎಂದರು.

ಕನ್ನಡದ ಐಕ್ಯತೆಯ ದ್ಯೋತಕವಾಗಿ ನಮ್ಮ ಸಾಹಿತ್ಯ -ಸಂಸ್ಕೃತಿ-ಪರಂಪರೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಿಸುತ್ತಾ ಬರಲಾಗಿದೆ. ನಾಡು-ನುಡಿಯ ಬಗೆಗಿನ ಒಲವನ್ನು ಜನಮನದಲ್ಲಿ ಸದಾ ಕಾಲ ಚೈತನ್ಯಶೀಲವಾಗಿಡಲು ಕನ್ನಡ ಸಾಹಿತ್ಯ ಸಮ್ಮೇಳನ ಸಹಕರಿಯಾಗಲಿದೆ ಎಂದರು.

Advertisements

ಅತಿ ಹೆಚ್ಚು ಕನ್ನಡ ಮಾತನಾಡುವ ಜನರಿರುವ ಖ್ಯಾತಿ ಇರುವ ನಮ್ಮ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಡಿಸೆಂಬರ್ 20, 21 ಮತ್ತು 22ರಂದು ಆಚರಿಸುವ ಅವಕಾಶ ಲಭಿಸಿರುವುದು ನಾವೆಲ್ಲರೂ ಸಂಭ್ರಮಿಸಬೇಕಾದ ವಿಷಯವಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಆಪರೇಷನ್ ಕಮಲ | ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್; ಬಿಜೆಪಿ ಅಧಿಕಾರ ದಾಹಕ್ಕೆ ರಾಜ್ಯಗಳು ಬಲಿ!

ಈ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಕಾರ್ಯಚಟುವಟಿಕೆಗಳು ಪ್ರಾರಂಭವಾಗಿವೆ. ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸುವ ದೃಷ್ಟಿಯಲ್ಲಿ 28 ಸಮಿತಿಗಳನ್ನು ರಚಿಸಿದ್ದು, ಎಲ್ಲಾ ಸಮಿತಿಗಳ ಅಧ್ಯಕ್ಷತೆಯನ್ನು ಜಿಲ್ಲೆಯ ಎಲ್ಲಾ ಶಾಸಕರು ವಹಿಸಿಕೊಂಡು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವುದು ಮತ್ತಷ್ಟು ಮೆರಗು ತಂದಿದೆ ಎಂದು ತಿಳಿಸಿದರು.

ಇದೇ ಡಿಸೆಂಬರ್ 20, 21 ಮತ್ತು 22ರಂದು ಆಚರಿಸುವ ನುಡಿ ಜಾತ್ರೆಯು ಬರಿ ನಾಡಿನ ಹಬ್ಬವಲ್ಲ ನಮ್ಮ ಮನೆ ಮನೆಯ ಹಬ್ಬವಾಗಬೇಕು. ಎಲ್ಲರೂ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20, 21 ಮತ್ತು 22 ರಂದು ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮತ್ತಷ್ಟು ಮೆರುಗನ್ನು ತರಬೇಕು ಎಂಬುದೇ ಆಶಯ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ, 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X