ಲೋಕಸಭಾ ಚುನಾವಣೆ | 85 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತದಾನಕ್ಕೆ ಅವಕಾಶ

Date:

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನರು (ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು) ಅಂಚೆ ಮತದಾನ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

- Advertisement -

ಈ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಪಾಲಿಕೆ, “ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆ, ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಅಂಚೆ ಮತದಾನ ಮಾಡುವ ನಿಟ್ಟನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮಾರ್ಚ್‌ 21 ರಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರ ಪಟ್ಟಿಯನುಸಾರ ಮನೆ-ಮನೆ ಭೇಟಿ ನೀಡಿ ಪಟ್ಟಿ ಸಂಗ್ರಹಿಸಿ 12ಡಿ ನಮೂನೆಗಳ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೆತನರು ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುವ ಅವಕಾಶವಿದ್ದು, ಅಂಚೆ ಮತದಾನ ಮಾಡಲು 12ಡಿ ನಮೂನೆ ಮೂಲಕ ದೃಢೀಕರಣ ನೀಡಿದ ನಂತರ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಅವಕಾಶವಿರುವುದಿಲ್ಲ” ಎಂದು ಹೇಳಿದೆ.

“ಹಿರಿಯ ನಾಗರಿಕರ ವಯಸ್ಸು 80 ರಿಂದ 85ಕ್ಕೆ ಹೆಚ್ಚಿಸಿರುವುದರಿಂದ ಎವಿಎಸ್‌ಸಿ ವರ್ಗದಡಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಅಂಚೆ ಮತಪತ್ರ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಚುನಾವಣಾ ಅಧಿಸೂಚನೆಯ ನಂತರ 5 ದಿನಗಳ ಒಳಗಾಗಿ ಭರ್ತಿಮಾಡಿದ ಧೃಡೀಕೃತ 12ಡಿ ನಮೂನೆಯನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗೆ ಸಲ್ಲಿಸಬೇಕಾಗಿರುತ್ತದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಹೋಳಿ ಹಬ್ಬ | ರೈನ್‌ ಡ್ಯಾನ್ಸ್‌, ಪೂಲ್‌ ಡ್ಯಾನ್ಸ್‌ಗೆ ಕಾವೇರಿ ನೀರು, ಬೋರ್‌ವೆಲ್‌ ನೀರು ಬಳಸದಿರಿ ಎಂದ ಜಲಮಂಡಳಿ

ಚುನಾವಣಾ ವೆಬ್ ಸೈಟ್ ಮೂಲಕ ನೋಂದಣಿಗೆ ಅವಕಾಶ

“ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರ ಮನೆ-ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ 12ಡಿ ನಮೂನೆ ಪಡೆದು ದೃಢೀಕರೀಸಲು ಸಾಧ್ಯವಾಗದಿದ್ದಲ್ಲಿ, ಭಾರತ ಚುನಾವಣಾ ಆಯೋಗದ ವೆಬ್‌ಸೈಟ್ https://www.eci.gov.in/ಗೆ ಭೇಟಿ ನೀಡಿದರೆ 12ಡಿ ನಮೂನೆಗಳು ಲಭ್ಯವಿದ್ದು, ಸದರಿ ನಮೂನೆಗಳನ್ನು ಭರ್ತಿಮಾಡಿ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ 12ಡಿ ನಮೂನೆಗಳನ್ನು ನೇರವಾಗಿ ಸಲ್ಲಿಸುವ ಅವಕಾಶವೂ ಇದೆ” ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...