ಲೋಕಸಭಾ ಚುನಾವಣೆ ಸಿದ್ಧತೆ; ಸಿಎಂ ಗೃಹ ಕಚೇರಿಯಲ್ಲಿ ಸಂಸದರು, ಶಾಸಕರೊಂದಿಗೆ ಸಭೆ

Date:

  • ಸಂಸದ ಡಿಕೆ ಸುರೇಶ್‌ ಸೇರಿ ಸಚಿವರು, ಶಾಸಕರು ಭಾಗಿ
  • ಅನುಕೂಲಸಿಂಧು ರಾಜಕಾರಣ ಬೇಕಾಗುತ್ತದೆ: ಡಿಕೆಶಿ

ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಿಎಂ ಗೃಹ ಕಚೇರಿಯಲ್ಲಿ ಬೆಂಗಳೂರಿನ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದರು.

- Advertisement -

ಈ ಸಭೆಗೆ ಸಂಸದ ಡಿಕೆ ಸುರೇಶ್‌, ಸಚಿವರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಇತರ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಡಿ ಕೆ ಶಿವಕುಮಾರ್, “ಸ್ಥಳೀಯವಾಗಿ ಒಮ್ಮೊಮ್ಮೆ ಅನುಕೂಲಸಿಂಧು ರಾಜಕಾರಣ ಮಾಡಿಕೊಳ್ಳಬೇಕಾಗುತ್ತದೆ. ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ದೊಡ್ಡ ದೊಡ್ಡ ನಾಯಕರನ್ನು ಸೇರಿಸಿಕೊಳ್ಳುತ್ತಿಲ್ಲ, ಅನ್ಯಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ನಮ್ಮ ಮುಂದಿನ ಗುರಿ ಲೋಕಸಭಾ ಚುನಾವಣೆ, ಯಾವುದೇ ಕಾರಣಕ್ಕೂ ದ್ವೇಷ ಸಾಧಿಸಬೇಡಿ, ಪಕ್ಷದ ಮತ ಗಳಿಕೆ ಪ್ರಮಾಣ ಹೆಚ್ಚು ಮಾಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದರು.

ಲೋಕಸಭೆ ಚುನಾವಣೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...