ಲೋಕಸಭಾ ಚುನಾವಣೆ | ಹಾಸನದಲ್ಲಿ ಜೆಡಿಎಸ್‌ ಭದ್ರಕೋಟೆ ಭೇದಿಸುವುದೇ ಕಾಂಗ್ರೆಸ್‌

Date:

ಹೊಯ್ಸಳರು ಆಳಿದ್ದ ಹಾಸನ ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಒಡೆಯರ ಆಳ್ವಿಕೆಯಲ್ಲಿತ್ತು. ಸ್ವಾತಂತ್ರ್ಯ ನಂತರ ಮೈಸೂರು ರಾಜ್ಯದ ಭಾಗವಾಗಿದ್ದ ಹಾಸನ ಲೋಕಸಭಾ ಕ್ಷೇತ್ರವನ್ನು 1952ರಲ್ಲಿ ಹಾಸನ-ಚಿಕ್ಕಮಗಳೂರು ಎಂದು ಕರೆಯಲಾಗುತ್ತಿತ್ತು. ನಂತರ, 1957ರಲ್ಲಿ ಹಾಸನ ಎಂದು ಪ್ರತ್ಯೇಕಿಸಲಾಯಿತು. ದೇವೇಗೌಡರ ಕುಟುಂಬವೇ ಹೆಚ್ಚು ಪ್ರತಿನಿಧಿಸುವ ಕಾರಣ ಜೆಡಿಎಸ್‌ ಭದ್ರಕೋಟೆ ಎಂದೇ ಗುರುತಿಸಿಕೊಂಡಿದೆ.

ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಸತತ ಐದು ಬಾರಿ ಗೆದ್ದು ಸಂಸದರಾಗಿದ್ದಾರೆ. ಜನತಾದಳದಿಂದ ಎರಡು ಬಾರಿ ಹಾಗೂ ಜೆಡಿಎಸ್‌ನಿಂದ ಮೂರು ಬಾರಿ ಗೆದ್ದಿದ್ದರು. ಮಾತ್ರವಲ್ಲದೆ, ಪ್ರಧಾನಿಯೂ ಆಗಿದ್ದರು.

ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸರಿಸುಮಾರು 20,16,000. ಈ ಪೈಕಿ 15,61,000 ಮತದಾರರಿದ್ದಾರೆ. ಕ್ಷೇತ್ರದ ಸುಮಾರು 78% ಜನರು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದರೆ, 22% ನಗರ ವಾಸಿಗಳಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರವೂ ಹಾಸನ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಕಡೂರಿನ ಜೊತೆಗೆ ಹಾಸನ ಜಿಲ್ಲೆಯ ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರೇ ಪ್ರಬಲಿಗರಾಗಿದ್ದಾರೆ. ಪರಿಶಿಷ್ಟ ಜಾತಿಗಳು, ಲಿಂಗಾಯತರು, ಕುರುಬರು, ಮುಸ್ಲಿಂ ಸಮುದಾಯಗಳು ಕ್ಷೇತ್ರದಲ್ಲಿ ಗಣನೀಯ ಮತದಾರರನ್ನು ಹೊಂದಿವೆ.

1957ರಿಂದ ಈವರೆಗಿನ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್‌ ಸಿದ್ದನಂಜಪ್ಪ, ಎನ್‌ ಶಿವಪ್ಪ, ಆರ್‌.ಎಚ್‌ ಲಕ್ಷ್ಮಣ್‌, ಎಸ್ ನಂಜೇಶ ಗೌಡ, ಎಚ್.ಎನ್ ನಂಜೇಗೌಡ, ಎಚ್.ಸಿ ಶ್ರೀಕಂಠಯ್ಯ, ಎಚ್.ಡಿ ದೇವೇಗೌಡ, ರುದ್ರೇಶ್‌ಗೌಡ, ಜಿ.ಪುಟ್ಟಸ್ವಾಮಿಗೌಡ, ಪ್ರಜ್ವಲ್ ರೇವಣ್ಣ ಲೋಕಸಭೆಯಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಪ್ರಜ್ವಲ್‌ ರೇವಣ್ಣ – ಕ್ಷೇತ್ರದಿಂದ ಆಯ್ಕೆಯಾದ ಮೂರನೇ ಅತಿ ಕಿರಿಯ ಸಂಸದ.

2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇ‌ತ್ರವನ್ನು ದೇವೇಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ಮಂಜು ಅವರನ್ನು ಪ್ರಬಲವಾಗಿ ಎದುರಿಸಿದ ಪ್ರಜ್ವಲ್, 1,00,462 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಸದ್ಯ, ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಮಾಜಿ ಸಂಸದ ಜಿ ಪುಟ್ಟಸ್ವಾಮಿ ಗೌಡರ ಮೊಮ್ಮಗ ಶ್ರೇಯಸ್‌ ಪಟೇಲ್ ಅವರನ್ನು ಕೈಪಡೆ ಕಣಕ್ಕಿಳಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರೇವಣ್ಣ ವಿರುದ್ಧ ಹೊಳೆನರಸೀಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೇಯಸ್‌, ಭಾರೀ ಪೈಪೋಟಿ ನೀಡಿದ್ದರು. ಅಂದಹಾಗೆ, 1999ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ಪುಟ್ಟಸ್ವಾಮಿಗೌಡ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರೇವಣ್ಣ ವಿರುದ್ಧ ಕೇವಲ 3,152 ಮತಗಳ ಅಂತರದಿಂದ ಸೋತಿದ್ದ ಶ್ರೇಯಸ್‌ ದೊಡ್ಡಗೌಡರ ಕುಟುಂಬದ ಬೆವರಿಳಿಯುವಂತೆ ಮಾಡಿದ್ದರು. 2004ರಿಂದ ಹೊಳೆನರಸೀಪುರದಲ್ಲಿ ನಿರಾಯಾಸವಾಗಿ ಗೆಲ್ಲುತ್ತಾ ಬಂದಿದ್ದ ರೇವಣ್ಣರನ್ನು ಶ್ರೇಯಸ್‌ ಸೋಲಿನ ಸಮೀಪಕ್ಕೆ ಕರೆದೊಯ್ದು, ಸೋಲಿನ ಆತಂಕ ಹೇಗಿರುತ್ತದೆ ಎಂಬುದನ್ನು ತೋರಿಸಿದ್ದರು.

ಇದೀಗ, ಅವರು ರೇವಣ್ಣ ಅವರ ಪುತ್ರ ಪ್ರಜ್ವಲ್ ವಿರುದ್ಧ ಲೋಕಸಭಾ ಹೋರಾಟಕ್ಕೆ ಇಳಿದಿದ್ದಾರೆ. ಹೀಗಾಗಿ, ಹಾಸನ ಲೋಕಸಭಾ ಚುನಾವಣೆ ಕುತೂಹಲವಾಗಿರುವುದಂತೂ ಖಚಿತ. ಜತೆಗೆ ಮತದಾರರೂ ಕೂಡಾ ತಮ್ಮ ಮತದ ಶಕ್ತಿಯನ್ನು ತೋರಿಸಲು ಇನ್ನಷ್ಟು ಉತ್ಸುಕರಾಗಿದ್ದಾರೆ. ಯಾರಿಗೆ ಮಣೆ ಹಾಕುತ್ತಾರೆ ಕಾದು ನೋಡಬೇಕಿದೆ.

2019 ಜನಾದೇಶ: ಜೆಡಿಎಸ್‌ನ ಪ್ರಜ್ವಲ್ ರೇವಣ್ಣ 676,606 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಎ ಮಂಜು 535,382 ಮತಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದ್ದರೆ, ಬಿಎಸ್‌ಪಿಯ ವಿನೋದರಾಜ್ ಕೆ ಎಚ್ 38,761 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು.

2014ರ ಜನಾದೇಶ: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು 5,09,841 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ ಪ್ರತಿನಿಧಿಸಿದ್ದ ಎ ಮಂಜು 409,378 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರೆ, ಬಿಜೆಪಿಯ ಸಿ ಎಚ್ ವಿಜಯ್‌ಶಂಕರ್‌ 1,65,688 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ...

ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ...

ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶ್ವರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...