ಕಲಬುರಗಿ | ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಶಿಕ್ಷಕ, ತಲೆ ಮರೆಸಿಕೊಂಡ ಬಿಇಒ

Date:

ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ಮಂಜೂರು ಮಾಡಲು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

- Advertisement -

ಆಳಂದ ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತ ರಾಠೋಡ್ ಅವರ ಕಚೇರಿ ಮೇಲೆ ಶನಿವಾರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಇಒ ಪರವಾಗಿ 50 ಸಾವಿರ ರೂ. ಲಂಚದ ಹಣ ಪಡೆಯುತ್ತಿದ್ದ ಕಾಳಗಿ ತಾಲೂಕಿನ ಶಿಕ್ಷಕ ರಾಧಾಕೃಷ್ಣ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನಿವೃತ್ತ ಶಿಕ್ಷಕಿಯೊಬ್ಬರ ಪಿಂಚಣಿಗೆ ಸಂಬಂಧಿಸಿದ ಕಡತಗಳಿಗೆ ಸಹಿ ಮಾಡಲು ಬಿಇಒ ಹನಮಂತ ರಾಠೋಡ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಿಕ್ಷಕಿಯ ಪತಿ ಯಶವಂತರಾಯ ಜಮಾದಾರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದರು.‌ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೇನಹಾಳ ಹಾಗೂ ಪಿಐ ರಾಜಶೇಖರ ಹಳಿಗೋಧಿ ನೇತ್ರತ್ವದಲ್ಲಿ ದಾಳಿ ನಡೆಸಲಾಯಿತು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ದೇವರ ದರ್ಶನ ಮುಗಿಸಿ ವಾಪಸ್‌ ಬರುವಾಗ ಭೀಕರ ಅಪಘಾತ; ನಾಲ್ವರು ಸಾವು

ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ ರಾಧಾಕೃಷ್ಣನನ್ನು ಬಂಧಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಹಣಮಂತ ರಾಠೋಡ್ ಪರಾರಿಯಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...