ವಿವಿಧೆಡೆ ಲೋಕಾಯುಕ್ತ ದಾಳಿ; ಇಂಜಿನಿಯರ್ ಮನೆಯಲ್ಲಿ 300 ಜೊತೆ ಶೂ ಪತ್ತೆ

Date:

ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಹಲವು ಸರ್ಕಾರಿ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದ ಆರೋಪದ ಮೇಲೆ ದಾಳಿ ನಡೆದಿದ್ದು, ಹಲವೆಡೆ, ನಗದು ಸೇರಿದಂತೆ ಹಲವಾರು ಬೆಲೆ ಬಾಳುವ ವಸ್ತುಗಳನ್ನು ಲೋಕಾಯುಕ್ತ ವಶಕ್ಕೆ ಪಡೆದಿದೆ.

ಶಿವಮೊಗ್ಗದಲ್ಲಿ ತುಂಗಾ ಮೇಲ್ದಂಡೆ ಯೋಜನೆ ಇಂಜಿನಿಯರ್ ಪ್ರಶಾಂತ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದಾಯಕ್ಕೂ ಮೀರಿ ಗಳಿಸಿದ್ದ ಹಲವಾರು ಚಿನ್ನ-ಬೆಳ್ಳಿ ವಸ್ತುಗಳು ಪತ್ತೆಯಾಗಿವೆ. 3.5 ಕೆಜಿ ಬಂಗಾರ, 24 ಕೆಜಿ ಬೆಳ್ಳಿ ಹಾಗೂ 25 ಲಕ್ಷ ಹಾರ್ಡ್ ಕ್ಯಾಶ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾತ್ರವಲ್ಲದೆ, ಪ್ರಶಾಂತ್ ಅವರು ಆರು ಎಕರೆ ಕೃಷಿ ಜಮೀನು ಮತ್ತು ಎರಡು ಸೈಟ್‌ಗಳನ್ನು ಹೊಂದಿದ್ದಾರೆ. ಅವರ ಮನೆಯಲ್ಲಿ 50 ಬಾಟಲಿ ವಿದೇಶಿ ಮದ್ಯ ಹಾಗೂ ಸುಮಾರು 300 ಜೊತೆ ಶೂಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು, ಶಿಕಾರಿಪುರದ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಶಂಕರ್ ನಾಯ್ಕ್ ಮನೆಯ ಮೇಲೂ ದಾಳಿ ನಡೆದಿದ್ದು, ಅವರ ಮನೆಯಲ್ಲಿ 350 ಗ್ರಾಂ ಚಿನ್ನ, 3 ಕೆಜಿ ಬೆಳ್ಳಿ ಪತ್ತೆಯಾಗಿದೆ. ಅವರು 10 ಎಕರೆ ಜಮೀನು ಹೊಂದಿರುವುದು ದಾಖಲೆಗಳಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಿಪಿಎಲ್ ಕಾರ್ಡ್ ಹೊಂದಿದ್ದ 21 ಸಾವಿರ ಸರ್ಕಾರಿ ನೌಕರರಿಗೆ 11 ಕೋಟಿ ರೂ. ದಂಡ

ಬೆಂಗಳೂರಿನ ರಾಜಾಜಿನಗರದ ಬಸವೇಶ್ವರ ಪ್ರೌಢಶಾಲೆಯ ಮೇಲೂ ಲೋಕಾಯುಕ್ತ ದಾಳಿ ಮಾಡಿದ್ದು, 9ನೇ ತರಗತಿ ವಿದ್ಯಾರ್ಥಿಗೆ ವರ್ಗಾವಣೆ ಪತ್ರ (ಟಿ.ಸಿ) ನೀಡಲು 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಾಲೆಯ ಮುಖ್ಯಶಿಕ್ಷಕ ವಿ ನಾರಾಯಣ ಅವರನ್ನು ಸಾಕ್ಷ್ಯಸಮೇತ ವಶಕ್ಕೆ ಪಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಿರಿಯ ಉಪನೋಂದಣಾಧಿಕಾರಿ ಶಿವಶಂಕರ್ ಮೂರ್ತಿ ಅವರ ಮನೆ ಮೇಲೂ ದಾಳಿ ನಡೆದಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಅಲ್ಲದೆ, ತುಮಕೂರು, ಮೈಸೂರು ಮತ್ತು ಹಾವೇರಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ...

ಶಿವಮೊಗ್ಗ | ಹದಿನೈದು ವರ್ಷ ಆಡಳಿತ; ನೆಟ್ವರ್ಕ್ ಸಮಸ್ಯೆ ನೀಗಿಸದ ಸಂಸದರು: ಶಾಸಕ ಬೇಳೂರು ಗೋಪಾಲಕೃಷ್ಣ

ಹಳ್ಳಿಗಾಡು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತಲೆ ದೂರಿದೆ. ಹದಿನೈದು ವರ್ಷದ...

ಗದಗ | ಬಿಜೆಪಿ, ಎಬಿವಿಪಿ ಬೃಹತ್‌ ಪ್ರತಿಭಟನೆ; ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ...

ಹಾಸನ | ಸಿಪಿಐಎಂ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಭಾರತ ಉಳಿಸುವಂತೆ ಮತದಾರರಲ್ಲಿ ಮನವಿ

ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ...