ಜೂನ್​​ 30ರೊಳಗೆ ಎಲ್ಲ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ಗಡುವು

Date:

  • ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಗಡುವು
  • ‘ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚನೆ ನೀಡಿದ್ದಾರೆ’

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಶಾಸಕರಾಗಿ ಆಯ್ಕೆಯಾದ 224 ಸದಸ್ಯರಿಗೂ ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಗಡುವು ನೀಡಿದ್ದಾರೆ.

ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಜೂನ್​​ 30ರೊಳಗೆ ಎಲ್ಲ ಶಾಸಕರು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಎಲ್ಲ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚನೆ ನೀಡಿದ್ದಾರೆ.

“ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ” ಎಚ್ಚರಿಕೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲೋಕಾಯುಕ್ತ ನಿಯಮದಲ್ಲಿ ಏನಿದೆ?

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರು, ನೌಕರರು ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ.

ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ಜನಪ್ರತಿನಿಧಿಗಳು ಕಡ್ಡಾಯವಾಗಿ ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ ನೀಡಲೇ ಬೇಕಾಗಿರುವುದು ಕಾನೂನು. ಆದರೆ ಆಸ್ತಿ ವಿವರ ನೀಡುವಂತೆ ಲೋಕಾಯುಕ್ತ ಇಲಾಖೆ ಜನಪ್ರತಿನಿಧಿಗಳಿಗೆ ಹಲವು ಬಾರಿ ನೋಟಿಸ್ ನೀಡಿದ್ದರೂ, ಜನಪ್ರತಿನಿಧಿಗಳು ಅದರ ಬಗ್ಗೆ ತಲೆಕೆಡಿಸಿಕೊಳ್ಳದ ಸಾಕಷ್ಟು ನಿದರ್ಶನಗಳಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ...

ಚುನಾವಣೆಗೆ ಜನರ ಬೆಂಬಲ ಬೇಕು, ಹಣವಲ್ಲ; ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಡಿಎಂಕೆ ತಿರುಗೇಟು

ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ʼಲೋಕಸಭೆ ಎಲೆಕ್ಷನ್‌ಗೆ ಸ್ಪರ್ಧೆ...