ರಾಜ್ಯದ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Date:

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ಕರ್ನಾಟಕದ ಹಲವೆಡೆ ಸರ್ಕಾರದ ನಾನಾ ಇಲಾಖೆಗಳ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್ 30 ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

- Advertisement -

ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳ ಸರ್ಕಾರದ 17 ನಾನಾ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ 90 ಕಡೆ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಸಂದರ್ಶನ | ಸಡಿಲಗೊಂಡ ಪಿಎಫ್ ನಿಯಮ: ಕಾರ್ಮಿಕರ ಕೈಹಿಡಿಯುವುದೇ...

ತುರ್ತು ಸಂದರ್ಭಗಳಲ್ಲಿ ಪಿಎಫ್ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ಇಪಿಎಫ್‌ಒ ಸರಳಗೊಳಿಸಿರುವುದು ಕಾರ್ಮಿಕರಿಗೆ ತಕ್ಷಣದ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಈ ನಿಯಮ ಸಡಿಲಿಕೆಯಿಂದ ಕಾರ್ಮಿಕರ ನಿವೃತ್ತಿ ಬದುಕಿನ ಭದ್ರತಾ ನಿಧಿ ಕರಗುವ ಅಪಾಯವಿದೆ...

ಚಿತ್ರದುರ್ಗದಲ್ಲಿ ಭ್ರಷ್ಟರ ಬೇಟೆಗೆ ಮುಂದಾದ ಲೋಕಾಯುಕ್ತ ಅಧಿಕಾರಿಗಳು

ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ಲೋಕಾಯುಕ್ತರು ದಾಳಿ ಅ.30 ರಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಮನೆಗೆ ಒಂದು ತಂಡ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್‌ಗೆ ಎರಡನೇ ತಂಡ ತೆರಳಿ ಪರಿಶೀಲನೆ ನಡೆಸಿದ್ದಾರೆ. ದಾಳಿಯಲ್ಲಿ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಹಾಗೂ ನಗದು ಪತ್ತೆಯಾಗಿದೆ. ಸುಮಾರು 400 ಗ್ರಾಂ ಚಿನ್ನ, ಬೆಳ್ಳಿ ಆಭರಣಗಳು ಸೇರಿದಂತೆ ಒಂದೂವರೆ ಲಕ್ಷ ನಗದು ಹಣ ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತರು ಪರಿಶೀಲನೆ ಮುಂದುವರೆಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯ ಮೇಲೆ ದಾಳಿ ನಡೆಸಿ, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ಹಾಸನದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ

ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲ್ಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಎಚ್.ಇ.ನಾರಾಯಣ ಎಂಬುವವರ ನಗರದ ಹೊರವಲಯದ ಬೊಮ್ಮನಾಯಕನಹಳ್ಳಿರುವ ಅವರ ಮನೆ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ಹಾವೇರಿಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು

ಹಾವೇರಿ ಆರ್‌ಎಫ್‌ಒ ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ ಆರ್‌ಎಫ್‌ಒ ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಏಕಕಾಲಕ್ಕೆ 9 ಕಡೆಗಳಲ್ಲಿ ದಾಳಿ ಮಾಡಿದ್ದಾರೆ.

ಶಿವಾಜಿನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನ ಬಳಿ ಇರುವ ಮನೆಗಳಲ್ಲಿ ಶೋಧ ನಡೆಸಿದ್ದಾರೆ.

ಆರ್‌ಎಫ್‌ಒ ಪರಮೇಶಪ್ಪ ಮೂವರು ಪತ್ನಿಯರ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಹಾವೇರಿಯ ವರದಾನೇಶ್ವರಿ ಪಾರ್ಕ್ ಬಳಿಯ ಎರಡು ಮನೆಗಳು, ಶಿವಾಜಿನಗರದ ಮನೆ, ಕುರುಬಗೊಂಡದ ಮನೆ ಮತ್ತು ಹೆಡಿಗೊಂಡ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​​ ಮೇಲೂ ದಾಳಿ ಮಾಡಲಾಗಿದೆ.

ಬೆಳಗಾವಿಯಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ

ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಎಇಇ ಎಮ್‌.ಎಸ್‌.ಬಿರಾದಾರ ಮನೆ ಮೇಲೆ ದಾಳಿ ನಡೆದಿದೆ. ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂಟ್ ನಲ್ಲಿ ಇರುವ ನಿವಾಸದ ಮೇಲೆ ದಾಳಿ ಮಾಡಿದ್ದು, ಲೋಕಾಯುಕ್ತ ಎಸ್​ಪಿ ಹನುಮಂತರಾಯ್ ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.

ಕಲಬುರಗಿಯಲ್ಲಿ ದಾಳಿ‌

ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ ಕೆಬಿಜೆಎನ್ ಎಲ್ ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಆರೋಪ ಹಿನ್ನಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬಳ್ಳಾರಿ ಕಂದಾಯ ನಿರೀಕ್ಷಕ ಮಂಜುನಾಥ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ತಾಲೂಕು ಕಚೇರಿಯಲ್ಲಿ ಹಾಗೂ ಗುಗ್ಗರ ಹಟ್ಟಿಯ ನಿವಾಸದ ಮೇಲೆ ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿ, ಹೊಸಪೇಟೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್‌ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆ ಸಿಪಿಐ ಸುರೇಶ್ ಬಾಬು ನೇತೃತ್ವದಲ್ಲಿ ದಾಖಲೆ ಪರಿಶೀಲನೆ ಮುಂದುವರಿದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದುಬಾರಿ ಫೋನ್ ಕದಿಯೋದಕ್ಕೆ ತಂಡವನ್ನೇ ಕಟ್ಟಿದ್ದ ಕಳ್ಳ; ಮೊಬೈಲ್ ಬೆಲೆ ಆಧರಿಸಿ ಕಮಿಷನ್ ನೀಡುತ್ತಿದ್ದ!

ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತರ ಶಾಕ್​​

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ, ಬೆಂಗಳೂರಿನ ಕೆ.ಆರ್.​ಪುರಂ ಎಆರ್​ಒಗೆ ಸೇರಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರಿನ ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್​ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 8 ಲಕ್ಷ ನಗದು, 200 ಗ್ರಾಂ ಚಿನ್ನಾಭರಣ ಪತ್ತೆ ಆಗಿದೆ. ಸತ್ತೇಗಾಲ ಬಳಿ 7 ಎಕರೆ ಫಾರ್ಮ್​ಹೌಸ್​ ಹೊಂದಿರುವ ಶ್ರೀನಿವಾಸ್, ಟ್ರ್ಯಾಕ್ಟರ್​, ಕ್ವಾಲೀಸ್ ಕಾರು ಕೂಡ ಪತ್ತೆ ಆಗಿದೆ.

ಶಿರಾ ಆರ್ ಡಿಪಿಆರ್ ಸಹಾಯಕ ಇಂಜಿನಿಯರ್ ಮೆನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ತುಮಕೂರಿನ ಶಿರಾದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸಹಾಯ ಎಂಜಿನಿಯರ್ ನಾಗೇಂದ್ರ ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಪಿಗಳಾದ ಮಂಜುನಾಥ್, ಹರೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ನಗರದ ಮಿರ್ಜಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆ ಮತ್ತು ಶಿರಾ ಪಟ್ಟಣದಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಹಕಾರ ಸಂಘಗಳ ಸ್ವಾಯತ್ತ ಬೆಳವಣಿಗೆಗೆ ಸರ್ಕಾರ ಅವಕಾಶ ಕಲ್ಪಿಸಲಿ: ಎ.ಎಸ್.ಪೊನ್ನಣ್ಣ

ಕೊಡಗು ಸಹಕಾರ ಸಂಘ ಸಂಸ್ಥೆಗಳು ಸ್ವಾಯತ್ತವಾಗಿ ಬೆಳೆಯಲು ಸರ್ಕಾರ ಹೆಚ್ಚಿನ ಅವಕಾಶ...

ಮಂಗಳೂರು | ಸೇವೆಗೆ ಮನ್ನಣೆ: ಯೆನೆಪೋಯ ಪದವಿ ಕಾಲೇಜಿನ ಮೂವರಿಗೆ ರಾಜ್ಯ ಪ್ರಶಸ್ತಿ

ಯೆನೆಪೋಯ (ಪರಿಗಣಿತ) ವಿಶ್ವವಿದ್ಯಾಲಯದ ಘಟಕ ಸಂಸ್ಥೆಯಾದ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್,...

ನಾಗಾವಿ ಪಿ.ಎಮ್.ಶ್ರೀ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಅರಿವು ಕಾಯಕ್ರಮ

ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅರಿವು ಕಾಯಕ್ರಮವನ್ನು ಜಿಲ್ಲಾ ಪಂಚಾಯತ್, ಮಕ್ಕಳ...

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ ಮೀನುಗಾರರ ಸಂಕಷ್ಟ

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ...