- 12 ಫ್ಲ್ಯಾಟ್, ನೆಲಮಂಗಲದಲ್ಲಿ ₹1.5 ಕೋಟಿ ಮೌಲ್ಯದ 5 ಎಕರೆ ಜಮೀನು
- ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಪ್ರಕರಣ ದಾಖಲು
ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ ಸಂಬಂಧಿಸಿದ ಮೂರು ಸ್ಥಳಗಳಲ್ಲಿ ₹1.40 ಕೋಟಿ ನಗದು ಪತ್ತೆಯಾಗಿದೆ.
ಗಂಗಾಧರಯ್ಯ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆಂಬ ಆರೋಪದ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಗಂಗಾಧರಯ್ಯ ನಿವಾಸ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ ಏಳು ಸ್ಥಳಗಳ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ, ಮೂರು ಸ್ಥಳಗಳಲ್ಲಿ ₹1.40 ಕೋಟಿ ನಗದು, ಯಲಹಂಕ, ಜೆ.ಸಿ ನಗರ ಮತ್ತು ಹೆಬ್ಬಾಳದಲ್ಲಿ 12 ಫ್ಲ್ಯಾಟ್, ನೆಲಮಂಗಲದಲ್ಲಿ ₹1.5 ಕೋಟಿ ಮೌಲ್ಯದ 5 ಎಕರೆ ಜಮೀನು, ಮಲ್ಲೇಶ್ವರದಲ್ಲಿ ₹3.5 ಕೋಟಿ ಮೌಲ್ಯದ ನಿವೇಶನ ಹೊಂದಿರುವುದು ಪತ್ತೆಯಾಗಿದೆ. ಮನೆಯಲ್ಲಿದ್ದ ನಗದು ಮತ್ತು ₹1 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಒಬ್ಬರು ಲೋಕಾಯುಕ್ತ ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಗಂಗಾಧರಯ್ಯ ಅವರು ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಲೋಕಾಯುಕ್ತ ಅಧಿಕಾರಿಗಳು ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸಿದ್ದಾರೆ.