ಲೋಕಾಯುಕ್ತ ದಾಳಿ | ಗಂಗಾಧರಯ್ಯ ನಿವಾಸದಲ್ಲಿ ₹1.40 ಕೋಟಿ ನಗದು, ಚಿನ್ನಾಭರಣ ಪತ್ತೆ

Date:

  • 12 ಫ್ಲ್ಯಾಟ್, ನೆಲಮಂಗಲದಲ್ಲಿ ₹1.5 ಕೋಟಿ ಮೌಲ್ಯದ 5 ಎಕರೆ ಜಮೀನು
  • ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಪ್ರಕರಣ ದಾಖಲು

ಬಿಬಿಎಂಪಿ ಯಲಹಂಕ ವಲಯದ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಗಂಗಾಧರಯ್ಯ ಅವರಿಗೆ ಸಂಬಂಧಿಸಿದ ಮೂರು ಸ್ಥಳಗಳಲ್ಲಿ ₹1.40 ಕೋಟಿ ನಗದು ಪತ್ತೆಯಾಗಿದೆ.

- Advertisement -

ಗಂಗಾಧರಯ್ಯ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆಂಬ ಆರೋಪದ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಗಂಗಾಧರಯ್ಯ ನಿವಾಸ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ ಏಳು ಸ್ಥಳಗಳ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ, ಮೂರು ಸ್ಥಳಗಳಲ್ಲಿ ₹1.40 ಕೋಟಿ ನಗದು, ಯಲಹಂಕ, ಜೆ.ಸಿ ನಗರ ಮತ್ತು ಹೆಬ್ಬಾಳದಲ್ಲಿ 12 ಫ್ಲ್ಯಾಟ್, ನೆಲಮಂಗಲದಲ್ಲಿ ₹1.5 ಕೋಟಿ ಮೌಲ್ಯದ 5 ಎಕರೆ ಜಮೀನು, ಮಲ್ಲೇಶ್ವರದಲ್ಲಿ ₹3.5 ಕೋಟಿ ಮೌಲ್ಯದ ನಿವೇಶನ ಹೊಂದಿರುವುದು ಪತ್ತೆಯಾಗಿದೆ. ಮನೆಯಲ್ಲಿದ್ದ ನಗದು ಮತ್ತು ₹1 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಒಬ್ಬರು ಲೋಕಾಯುಕ್ತ ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಗಂಗಾಧರಯ್ಯ ಅವರು ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಲೋಕಾಯುಕ್ತ ಅಧಿಕಾರಿಗಳು ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...