ಇ-ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪುರಸಭೆ ಕಂದಾಯ ಅಧಿಕಾರಿ ಲೋಕಾಯುಕ್ತ ಶುಕ್ರವಾರ ಬಲೆಗೆ ಬಿದ್ದಿದ್ದಾರೆ.
ಬಾಗೇಪಲ್ಲಿ ಪುರಸಭೆ ಕಂದಾಯ ಅಧಿಕಾರಿ ಅರುಣ್ ಕುಮಾರ್ ಲೋಕಾಯುಕ್ತ ಟ್ರ್ಯಾಪ್‌ಗೆ ಒಳಗಾದ ಅಧಿಕಾರಿ.
ವ್ಯಕ್ತಿಯೊಬ್ಬರ ವಿಭಾಗವಾರು ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ದೂರಿನ ಹಿನ್ನೆಲೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಆಶಾ ಕಾರ್ಯಕರ್ತೆಯರಿಗೆ ರೂ. 10 ಸಾವಿರ ಸಂಭಾವನೆ; ಭರವಸೆ ಹುಸಿಯಾಗದಿರಲಿ
ಕಂದಾಯ ಅಧಿಕಾರಿ ಅರುಣ್ ಕುಮಾರ್ ಲಂಚ ಪಡೆಯುವಾಗ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ನಗದು ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.