ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಲ್ಲಿ ಲೋಪದೋಷ ಆಗಿವೆ: ಪ್ರಿಯಾಂಕ್ ಖರ್ಗೆ

Date:

  • ‘ಲೋಪದೋಷ ಬಗ್ಗೆ ಹೆಚ್ಚಿನ ತನಿಖೆ ಈಗಾಗಲೇ ನಡೆಯುತ್ತಿದೆ’
  • ‘ಖಾಲಿ ಇರುವ ಹುದ್ದೆಗಳ ಕೂಡಲೇ ಭರ್ತಿಗೆ ಸೂಚಿಸಿದ್ದೇವೆ’

ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಲ್ಲಿ ಲೋಪದೋಷಗಳು ಕಂಡುಬಂದಿವೆ. ಈ ಕುರಿತಾಗಿ ಹೆಚ್ಚಿನ ತನಿಖೆ ಈಗಾಗಲೇ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಯಚೂರು, ವಿಜಯನಗರ, ಬಳ್ಳಾರಿ ವಿವಿಗಳಲ್ಲಿ ಅವ್ಯವಹಾರ ಆಗಿದೆ. ಸಿಸಿಟಿವಿ ಕ್ಯಾಮರಾ ಅಳವಡಿಕೆಯಲ್ಲಿ ಅಕ್ರಮ ನಡೆದಿದೆ. ಹದಿನೈದು ದಿನಗಳಲ್ಲಿ ಲೋಪದೋಷಗಳು ಸರಿ ಆಗಬೇಕು. ಕಾನೂನು ಮೀರಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ” ಎಂದರು.

“ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಹಿಂದಿನ ಸರ್ಕಾರ ನಿರ್ಲಕ್ಷ್ಯ ತೋರಿದೆ. ಮುಂಬಡ್ತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿಗೆ ಸೂಚಿಸಿದ್ದೇವೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ಹೈಕಮಾಂಡ್ ನಿರ್ಧಾರ ಪ್ರಸ್ತುತ

ವರ್ಷಕ್ಕೆ ಹಿರಿಯ ಸಚಿವರು ಬಿಟ್ಟು ಕೊಡಬೇಕು ಅಂತ ಸಚಿವ ಕೆ ಹೆಚ್​ ಮುನಿಯಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿ, “ಹೈಕಮಾಂಡ್ ಹೇಳಿದರೆ ಎಲ್ಲರೂ ಬಿಟ್ಟು ಕೊಡಬೇಕು. ನಾವು ಈ ಹಿಂದೆ ಬಿಟ್ಟು ಕೊಟ್ಟಿದ್ದೇವೆ. ಪಕ್ಷಕ್ಕೆ ಸೇವೆ ಸಲ್ಲಿಸಿ ಅಂದರೆ ಎಲ್ಲರೂ ಸಿದ್ಧರಿರಬೇಕು. ಹೈಕಮಾಂಡ್ ನಿರ್ಧಾರ ಮಾತ್ರ ಪ್ರಸ್ತುತ. ಬೇರೆ ಯಾರ ಹೇಳಿಕೆಯೂ ಅಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು...

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...