ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಬೈಕ್‌ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುರೇಶ್ ಆಚಾರ್ಯ(36), ಸಮೀಕ್ಷಾ(7) ಸುಶ್ಮಿತಾ (5) ಮತ್ತು ಸುಶಾಂತ್ (2) ಮೃತಪಟ್ಟವರು. ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಬಳಿಕ ಈ ದಾರುಣ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ತುಮಕೂರು | ವಿಷವಿಲ್ಲದೇ ಜನರಿಗೆ ಆಹಾರ ನೀಡುವವನೇ ನಿಜವಾದ ರೈತ: ಸಿದ್ದಲಿಂಗ ಸ್ವಾಮೀಜಿ
ಇವರೆಲ್ಲರೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗಾಂಧಿನಗರದ ನಿವಾಸಿಗಳೆಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.
