ಕಲಬುರಗಿ ಜಿಲ್ಲೆಯ ಅಫಜಲಪುರ ಹೊರವಲಯದ ನೀರಾವರಿ ಕಚೇರಿ ಬಳಿ ಬುಧವಾರ ತಡರಾತ್ರಿ ಲಾರಿ ಮತ್ತು ಕಮಾಂಡರ್ ಜೀಪ್ ಮುಖಾಮುಖಿ ಢಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ.
ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಮೃತರು ಎಂದು ಗುರುತಿಸಲಾಗಿದ್ದು, ಮೃತರೆಲ್ಲವೂ ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಗುವಿನ ತಾಯಿ ಪೂಜಾ ದೊಡ್ಡಮನಿ (30) ಪ್ರಾಣಾಪಾಯದಿಂದ ಪಾರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.