ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

Date:

Advertisements

ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದರು. 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ಏಕಾಏಕಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ನಗರ ಯೋಜನಾ ಘಟಕದ ನಿರ್ದೇಶಕ ತಿಪ್ಪೇಸ್ವಾಮಿ ನಿವಾಸ ಹಾಗೂ ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ತಿಪ್ಪೇಸ್ವಾಮಿಯವರ ಮನೆಯಲ್ಲಿ ರಾಶಿ ರಾಶಿ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಪತ್ತೆಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಇದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಬೆಳ್ಳಿ 1

ಗಿರಿನಗರದಲ್ಲಿರುವ ತಿಪ್ಪೇಸ್ವಾಮಿಯವರ ಬಂಗಲೆಗೆ ಎಸ್‌ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಬಂಗಲೆಯಲ್ಲಿ ಪರಿಶೀಲನೆ ನಡೆಯುತ್ತಿದೆ. ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನ ಪತ್ತೆಯಾದ ಹಿನ್ನೆಲೆಯಲ್ಲಿ ಚಿನ್ನಾಭರಣ ತೂಕ ಹಾಕಲು ಲೋಕಾಯುಕ್ತ ಅಧಿಕಾರಿಗಳು ತಿಪ್ಪೇಸ್ವಾಮಿ ಮನೆಗೆ ಅಕ್ಕಸಾಲಿಗನನ್ನು ಕರೆಸಿಕೊಂಡಿರುವುದಾಗಿ ವರದಿಯಾಗಿದೆ.

Advertisements

ಅಲ್ಲದೆ, ತಿಪ್ಪೇಸ್ವಾಮಿ ಪತ್ನಿಯ ತವರು ಮನೆಯಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ದಾವಣಗೆರೆ ಲೋಕಾಯುಕ್ತ ಇನ್ಸ್ ಪೆಕ್ಟರ್ ಪ್ರಭು ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಅಲ್ಲದೆ ಮಾವನ ಮನೆಯಲ್ಲಿ ತಿಪ್ಪೇಸ್ವಾಮಿ ಅವರಿಗೆ ಸೇರಿದ ಆಸ್ತಿ ದಾಖಲೆಗಳು ಏನಾದರೂ ಸಿಗಬಹುದು ಎಂದು ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕೆಜಿಗಟ್ಟಲೆ ಚಿನ್ನ, ಬೆಳ್ಳಿ!

ತಿಪ್ಪೇಸ್ವಾಮಿಯವರ ಮನೆಯಲ್ಲಿ 28 ಕ್ಕೂ ಹೆಚ್ಚು ಜೊತೆ ಓಲೆ, ಎಂಟಕ್ಕೂ ಹೆಚ್ಚು ಐಷಾರಾಮಿ ವಾಚ್‌, 23ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಪೆಂಡೆಂಟ್ ಇರುವ ಸರ ಪತ್ತೆಯಾಗಿದೆ. ಜೊತೆಗೆ ಕೆಜಿ ಗಟ್ಟಲೆ ಬೆಳ್ಳಿ ವಸ್ತುಗಳ ಸಹಿತ ಸುಮಾರು ಏಳು ಲಕ್ಷ ನಗದು, ಹಾಗೂ ಕೆಲ ಆಸ್ತಿಪತ್ರಗಳು ಪತ್ತೆಯಾಗಿವೆ.

ಲೊಕಾ

ಅಕ್ರಮ ಆಸ್ತಿ ಸಂಪಾದನೆ ದೂರು ಬಂದ ಹಿನ್ನೆಲೆ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು, ಬೆಂಗಳೂರು, ಮಂಡ್ಯದ ಮಳವಳ್ಳಿಯಲ್ಲಿ ಇರುವ ಮಹೇಶ್ ಒಡೆತನದ ಮನೆಗಳು ಹಾಗೂ ಸಂಬಂಧಿಕರ ಮನೆಗಳ ಮೇಲೆ ಏಕಾಏಕಿ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ರೆಸಾರ್ಟ್‌ಗಳಲ್ಲಿ ಅವಘಡ ನಡೆದಲ್ಲಿ ಮಾಲೀಕರದ್ದೇ ಜವಾಬ್ದಾರಿ : ಅಕ್ರಮಗಳ ನಂತರ ಎಚ್ಚೆತ್ತ ಪ್ರವಾಸೋದ್ಯಮ ಇಲಾಖೆ

ಜೊತೆಗೆ ಕೆಆರ್‌ಎಸ್‌ನಲ್ಲಿ ಇರುವ ಮಹೇಶ್ ಪತ್ನಿ ಮಾಲೀಕತ್ವದ ಪೆಟ್ರೋಲ್ ಬಂಕ್ ಮೇಲೂ ದಾಳಿ ನಡೆದಿದೆ. ದಾಳಿ ವೇಳೆ ಒಂದಷ್ಟು ದಾಖಲೆಗಳು, ನಗದು ಹಾಗೂ ಚಿನ್ನಾಭರಣಗಳು ಸಿಕ್ಕಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ಅಕ್ಕಸಾಲಿಗರ ಸಮ್ಮುಖದಲ್ಲಿ ಚಿನ್ನಾಭರಣ ಮೌಲ್ಯಮಾಪನ ನಡೆಯುತ್ತಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X