ಪ್ರೇಮ ಪ್ರಕರಣ | ತುಮಕೂರಿನಿಂದ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳು ಹಾಸನದಲ್ಲಿ ಪತ್ತೆ

Date:

ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಪತ್ತೆ ಹಚ್ಚುವಲ್ಲಿ ತುಮಕೂರು ಜಿಲ್ಲೆಯ ಪಟ್ಟನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದಿಂದ ನಾಪತ್ತೆಯಾಗಿದ್ದ ಮಕ್ಕಳು ಹಾಸನದ ಕೆಎಸ್​ಆರ್​ಟಿಸಿ ಹೊಸ ಬಸ್​ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಹಾಸನ ಪೊಲೀಸರ ಸಹಾಯದೊಂದಿಗೆ ಪಟ್ಟನಾಯಕನಹಳ್ಳಿ ಪೊಲೀಸರು ಮಕ್ಕಳನ್ನು ರಕ್ಷಿಸಿದ್ದು, ಪೋಷಕರ ಮಡಿಲಿಗೆ ಸೇರಿಸಿದ್ದಾರೆ.

ಚಿಕ್ಕಬಾಣಗೆರೆ ಗ್ರಾಮದ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದು, ಗ್ರಾಮದಲ್ಲಿ ಆತಂಕ ಆವರಿಸಿತ್ತು. ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಾಪತ್ತೆಯಾಗಿದ್ದವರಲ್ಲಿ ಮಂಜುಳಾ-ಮಧು ಕುಮಾರ್ ಅವಳಿ ಮಕ್ಕಳು. ನಾಪತ್ತೆಯಾಗಿದ್ದ ಎಲ್ಲ ಮಕ್ಕಳು 15ರಿಂದ 16 ವರ್ಷದ ವಯಸ್ಸಿನವರು. ಒಂದೇ ಗ್ರಾಮದ, ಒಂದೇ ವಯಸ್ಸಿನ ಅಂತರವಿದ್ದ ನಾಲ್ಕು ಮಕ್ಕಳು ನಾಪತ್ತೆಯಾಗಿದ್ದದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಎಷ್ಟೊತ್ತಾದರೂ ಮಕ್ಕಳು ಮನೆಗೆ ಬಾರದಿದ್ದುದನ್ನು ಕಂಡ ಪೋಷಕರು ಗಾಬರಿಗೊಂಡು, ಎಲ್ಲ ಕಡೆ ಹುಡುಕಾಡಿದ್ದರು.

ಊರೆಲ್ಲಾ ಹುಡುಕಿದರೂ ಮಕ್ಕಳು ಸಿಗದಿದ್ದಾಗ ಪೋಷಕರು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದು, ಪಟ್ಟನಾಯಕಹಳ್ಳಿ ಡಿವೈಎಸ್​ಪಿ ನವೀನ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನಾಗಿ ರಚನೆ ಮಾಡಿ ಮಕ್ಕಳ ಶೋಧಕಾರ್ಯ ಆರಂಭಿಸಿದ್ದರು.

ತುಮಕೂರು, ಚಿಕ್ಕಮಗಳೂರು, ಬೆಂಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹುಡುಕಾಟ ನಡೆಸಿದ್ದರೂ ಮಕ್ಕಳು ಪತ್ತೆಯಾಗಿರಲಿಲ್ಲ. ಇದೀಗ ಹಾಸನದ ಕೆಎಸ್​ಆರ್​ಟಿಸಿ ಹೊಸ ಬಸ್ ನಿಲ್ದಾಣದಲ್ಲಿ ನಾಲ್ವರು ಮಕ್ಕಳು ಪತ್ತೆಯಾಗಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬಾಲಕಿಯೊಬ್ಬಳು ರಮೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ತಮ್ಮಿಬ್ಬರ ಪ್ರೀತಿಗೆ ಸಹಾಯ ಮಾಡಿದಕ್ಕೆ ಮೂವರು ಮಕ್ಕಳನ್ನು ಬಾಲಕಿ ತಮ್ಮ ಜತೆಯಲ್ಲೇ ಬೆಂಗಳೂರಿಗೆ ಕರೆದೊಯ್ದಿದ್ದಾಳೆ. ಬಳಿಕ ಬೆಂಗಳೂರಿನಿಂದ ಹಾಸನಕ್ಕೆ ತೆರಳಿದ್ದರು. ಇದೀಗ ಪೊಲೀಸರ ಸತತ ಪ್ರಯತ್ನದಿಂದ ನಾಲ್ವರು ಮಕ್ಕಳನ್ನು ಪತ್ತೆ ಮಾಡಿ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಯಡಿಯೂರಪ್ಪ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಶಾಸಕ ಚಂದ್ರಪ್ಪ

ರಘು ಚಂದನ್‌ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ...

ಧಾರವಾಡ | ‘ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆಗೂ, ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ’

ಮಾರ್ಚ್ 27ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...