ಪ್ರೇಮಿಗಳಿಬ್ಬರು ಮನೆಯಲ್ಲಿ ಪ್ರೀತಿಗೆ ಒಪ್ಪಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಹೊರವಲಯದ ತಾಯಮ್ಮ ದೇವಸ್ಥಾನ ಹತ್ತಿರ ನಡೆದಿದೆ.
ಸಾವಿಗೀಡಾದವರನ್ನು ಯುವಕ ರಾಜ (24), ಯುವತಿ ಪವಿತ್ರಾ ಛಲವಾದಿ (19) ಎಂದು ಗುರುತಿಸಲಾಗಿದೆ.
ಅಂತರ್ಜಾತಿ ಪ್ರೀತಿಗೆ ತಮ್ಮ ಕುಟುಂಬದವರು ಒಪ್ಪಲಿಲ್ಲ ಎಂದು ಬೇಸರಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.