ಹಾವೇರಿ | ಮನೆ ತೊರೆದಿದ್ದ ಪ್ರೇಮಿಗಳು; ಯುವಕನ ಮಾವನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

Date:

Advertisements

ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಪ್ರಕರಣದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಅಂತದ್ದೇ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದಲ್ಲಿ ಯುವಕನ ಪೋಷಕರ ಮೇಲೆ ಯುವತಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಂಗಳವಾರ ಮತ್ತೊಂದು ಪ್ರಕರಣ ಮಂಗಳವಾರ ವರದಿಯಾಗಿದೆ.

ಪ್ರೇಮ ಪ್ರಕರಣವೊಂದರಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದಲ್ಲಿ ಯುವಕನ ಮಾವನನ್ನು ಅರೆಬೆತ್ತಲೆಗೊಳಿಸಿ ಥಳಿಸಿರುವ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮದ ಯುವಕ ಮತ್ತು ಸಮೀಪದ ಚಳಗೇರಿಯ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಪ್ರೇಮಿಗಳು ಮನೆ ತೊರೆದು ಬೇರೆ ಊರಿಗೆ ಹೋಗಿದ್ದರು.

Advertisements

ಇದರಿಂದ ಕುಪಿತಗೊಂಡ ಯುವತಿಯ ಕುಟುಂಬಸ್ಥರು ಮುದೇನೂರು ಗ್ರಾಮಕ್ಕೆ ಗುಂಪು ಕಟ್ಟಿಕೊಂಡು ಬಂದು ದಾಂಧಲೆ ಮಾಡಿದ್ದಾರೆ. ಯುವಕ ಸೋದರಮಾವ, ಗ್ರಾಮ ಪಂಚಾಯತಿ ಸದಸ್ಯ ಪ್ರಶಾಂತ ಕಬ್ಬಾರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅರೆಬೆತ್ತಲೆಗೊಳಿಸಿ ಥಳಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಹಲಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X