ಮದ್ದೂರು | ಕೆಸ್ತೂರು ಗ್ರಾಪಂನಲ್ಲಿ ₹1.34 ಕೋಟಿ ಹಗರಣ ಸಾಬೀತು; ಕ್ರಮಕ್ಕೆ ಜಿಪಂ ಸಿಇಒ ಶಿಫಾರಸು

Date:

​ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಯಾವುದೇ ಕೆಲಸಗಳನ್ನು ನಿರ್ವಹಿಸದೆ ಸುಮಾರು ₹1.34 ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಜಿಲ್ಲಾ ಪಂಚಾಯಿತಿಯ ತನಿಖೆಯಲ್ಲಿ ಅಧಿಕೃತವಾಗಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಹಗರಣಕ್ಕೆ ಕಾರಣರಾದ ಅಂದಿನ ಪಿಡಿಒ ಹಾಗೂ ವಿವಿಧ ಅವಧಿಯ ಐವರು ಅಧ್ಯಕ್ಷರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವಂತೆ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ ಆರ್ ನಂದಿನಿ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.

- Advertisement -

​​ಮದ್ದೂರು ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್ ಬಾಬು ಟಿ ಎಲ್ ನೀಡಿದ ದೂರಿನನ್ವಯ 2025ರ ಫೆ.17ರಂದು ಈ ತನಿಖೆ ನಡೆಸಲಾಗಿತ್ತು. ಮದ್ದೂರು ತಾಲೂಕಿನ ಎಲ್ಲಾ ಪಂಚಾಯಿತಿಗಳ 15ನೇ ಹಣಕಾಸು ಯೋಜನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಕದ ತಟ್ಟಿದ ನಂತರವಷ್ಟೇ ಈ ಹಗರಣ ಬಯಲಾಗಿದೆ. 2020-21 ರಿಂದ 2023-24ನೇ ಸಾಲಿನವರೆಗೆ 15ನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆ ರೂಪಿಸದೆ ಮತ್ತು ನಿಯಮಗಳನ್ನು ಪಾಲಿಸದೆ ಹಣ ಪಾವತಿಸಲಾಗಿದೆ ಎನ್ನುವುದು ತನಿಖೆಯ ವೇಳೆ ಬೆಳಕಿಗೆ ಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಂಡ್ಯದ ಸ್ಥಳೀಯ ಲೆಕ್ಕಪರಿಶೋಧನಾ ಅಧಿಕಾರಿ ಕೆಸ್ತೂರು ಗ್ರಾಮ ಪಂಚಾಯಿತಿಯಲ್ಲಿ ಲೆಕ್ಕ ಪರಿಶೋಧನೆ ಮಾಡಿ ಸಲ್ಲಿಸಿರುವ ವರದಿಯನ್ವಯ 2020-21ನೇ ಸಾಲಿನಲ್ಲಿ ₹51,703ಗಳನ್ನು ವಸೂಲಾತಿಗೆ ಮತ್ತು ₹13,07,326 ಗಳ ಆಕ್ಷೇಪಣೆಗೆ ಸೂಚಿಸಿರುತ್ತಾರೆ. 2021-22ನೇ ಸಾಲಿನಲ್ಲಿ ₹4,71,554 ಗಳನ್ನು ವಸೂಲಾತಿಗೆ ಮತ್ತು ₹6,03,205 ಗಳನ್ನು ಆಕ್ಷೇಪಣೆಗೆ ಸೂಚಿಸಿರುತ್ತಾರೆ. 2022-23ನೇ ಸಾಲಿನಲ್ಲಿ ₹52.86,141 ಗಳನ್ನು ವಸೂಲಾತಿಗೆ ಮತ್ತು ₹13,51,317 ಗಳನ್ನು ಆಕ್ಷೇಪಣೆಗೆ ಸೂಚಿಸಿರುತ್ತಾರೆ ಹಾಗೂ 2023-24ನೇ ಸಾಲಿನಲ್ಲಿ ₹11,28,468 ಗಳನ್ನು ವಸೂಲಾತಿಗೆ ಮತ್ತು ₹5,01,732 ಗಳನ್ನು ಆಕ್ಷೇಪಣೆಗೆ ಸೂಚಿಸಿರುವುದು ಸದರಿ ಲೆಕ್ಕ ಪರಿಶೋಧನಾ ವರದಿಗಳಲ್ಲಿ ಕಂಡುಬಂದಿರುತ್ತದೆ.

​​ಕುಡಿಯುವ ನೀರಿನ ಸಾಮಗ್ರಿ ಮತ್ತು ವಿದ್ಯುತ್ ಉಪಕರಣಗಳ ಖರೀದಿಯಲ್ಲಿ ಕೆಟಿಪಿಪಿ (KTPP) ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಾಮಗ್ರಿಗಳನ್ನು ಅಳವಡಿಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಮತ್ತು ಖರೀದಿ ಪ್ರಕ್ರಿಯೆಯ ಮಾರ್ಗಸೂಚಿಗಳನ್ನು ಪಾಲಿಸದೆ ಹಣ ದುರುಪಯೋಗ ಮಾಡಲಾಗಿದೆ ಎನ್ನುವುದು ವರದಿಯಿಂದ ಸಾಬೀತಾಗಿದೆ.​ ವಿವಿಧ ಸಾಲುಗಳಲ್ಲಿ ಒಟ್ಟು ₹27,36,881, ₹81,86,901 ಮತ್ತು ₹22,03,072 ರಂತೆ ಭಾರೀ ಮೊತ್ತದ ಹಣ ದುರುಪಯೋಗವಾಗಿದ್ದು, ತನಿಖಾಧಿಕಾರಿಗಳು ಈ ಹಣವನ್ನು ವಸೂಲಿ ಮಾಡಲು ಶಿಫಾರಸು ಮಾಡಿದ್ದಾರೆ.​

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಎ), 48(4) ಮತ್ತು 48(5)ರ ಅನ್ವಯ ಈ ಕೆಳಗಿನವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.​ ಅಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಪ್ರಕಾಶ್ ಸೇರಿದಂತೆ, ವಿವಿಧ ಅವಧಿಯ ಅಧ್ಯಕ್ಷರುಗಳಾದ ಕೆ ಈಶ್ವರ್, ಬಿ ಜಿ ಮಂಜುಳಾ, ಎಂ ಆರ್ ಅನುಷಾ, ಹೇಮಲತಾ ಮತ್ತು ಕೆ ಪ್ರಕಾಶ್ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಇದನ್ನೂ ಓದಿ: ​ಮದ್ದೂರು | ಲೋಕಾಯುಕ್ತಕ್ಕೆ ನೀಡಿದ ದೂರಿನ ಫಲಶ್ರುತಿ; ಕಳಪೆ ರಸ್ತೆಗೆ ಮರುಜೀವ

​ರೈತ ಸಂಘವು ಹಲವು ವರ್ಷಗಳ ಹಿಂದೆಯೇ ಈ ಬಗ್ಗೆ ದೂರು ನೀಡಿದ್ದರೂ, ತನಿಖೆಯ ವಿಳಂಬ ಧೋರಣೆಗೆ ತೀವ್ರ ಬೇಸರ ವ್ಯಕ್ತಪಡಿಸಿದೆ. ಕೇವಲ ಒಂದು ಗಂಟೆಯಲ್ಲಿ ಮುಗಿಸಬಹುದಾದ ಪರಿಶೀಲನೆಯನ್ನು ವರ್ಷಗಟ್ಟಲೆ ಎಳೆದಾಡಿರುವುದು ಇಲಾಖೆಗಳ ಉದಾಸೀನತೆಯನ್ನು ತೋರಿಸುತ್ತದೆ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ. “ಭ್ರಷ್ಟರ ರಕ್ಷಣೆಗೆ ಇಲಾಖೆಗಳಿಲ್ಲ ಎಂಬ ಕಠಿಣ ಸಂದೇಶ ರವಾನೆಯಾಗಬೇಕು” ಎಂದು ಅವರು ಆಗ್ರಹಿಸಿದ್ದಾರೆ.

​ಪತ್ರಿಕಾಗೋಷ್ಠಿಯಲ್ಲಿ ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ ಎಲ್ ವಿನೋದ್ ಬಾಬು, ತಾಲೂಕು ಅಧ್ಯಕ್ಷ ಉಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗಪ್ಪಾಜಿ, ಉಪಾಧ್ಯಕ್ಷ ಜಿ ಎನ್ ಶಂಕರ್, ರವಿಕುಮಾರ್, ಸತೀಶ್ ಮತ್ತು ವೆಂಕಟೇಗೌಡ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...