​ಮದ್ದೂರು | ಲೋಕಾಯುಕ್ತಕ್ಕೆ ನೀಡಿದ ದೂರಿನ ಫಲಶ್ರುತಿ; ಕಳಪೆ ರಸ್ತೆಗೆ ಮರುಜೀವ

Date:

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಮಾದನಾಯಕನಹಳ್ಳಿಯಿಂದ ಸಿದ್ದರಾಮೇಶ್ವರ ದೇವಸ್ಥಾನದ ಮೂಲಕ ತಾಲ್ಲೂಕು ಗಡಿ ಸಂಪರ್ಕಿಸುವ ರಸ್ತೆಯ ಕಳಪೆ ಕಾಮಗಾರಿಯ ವಿರುದ್ಧ ನಡೆದ ಕಾನೂನು ಹೋರಾಟಕ್ಕೆ ಮೊದಲ ಯಶಸ್ಸು ಸಿಕ್ಕಿದೆ. ದೂರಿನ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪಂಚಾಯತ್ ರಾಜ್ ಇಂಜಿನಿಯರ್ ಮಂಡ್ಯ ವಿಭಾಗದ ಅಧಿಕಾರಿಗಳು ಸದರಿ ರಸ್ತೆಯ ಮರು ಡಾಂಬರೀಕರಣ (Resurfacing) ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.

- Advertisement -

​ಘಟನೆಯ ಹಿನ್ನೆಲೆ: ಚನ್ನಸಂದ್ರ ಗ್ರಾಮದ ನಿವಾಸಿ, ರಾಜ್ಯ ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಲಕ್ಷ್ಮಣ ಸಿ ಎಸ್ ಅವರು ಮಂಡ್ಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. 2022-23ನೇ ಸಾಲಿನ ಪ್ಯಾಕೇಜ್ ಸಂಖ್ಯೆ ಎಂಡಿಆರ್: ನಂ:4ರ ಅಡಿಯಲ್ಲಿ ನಡೆದ ಮೂರು ರಸ್ತೆಗಳು ಹಾಗೂ ಇತರ ನಾಲ್ಕು ರಸ್ತೆ ಕಾಮಗಾರಿಗಳು ಕಾಮಗಾರಿಗಳು ಅತ್ಯಂತ ಕಳಪೆಯಾಗಿದ್ದು, ಸಾರ್ವಜನಿಕ ಹಣ ದುರುಪಯೋಗವಾಗಿದೆ ಎಂದು ಅವರು ಗಂಭೀರವಾಗಿ ಆಪಾದಿಸಿ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

​ಮುಖ್ಯವಾಗಿ ಮದ್ದೂರು ತಾಲ್ಲೂಕಿನ ಮಾದನಾಯಕನಹಳ್ಳಿ-ಸಿದ್ದರಾಮೇಶ್ವರ ದೇವಸ್ಥಾನದ ರಸ್ತೆ, ಆರ್‌ ಹೆಚ್ ರಸ್ತೆಯಿಂದ ಅರೆಕಲ್ ದೊಡ್ಡ ಕ್ರಾಸ್, ಹಾಗೂ ತೊಪ್ಪನಹಳ್ಳಿ-ಚಂದಹಳ್ಳಿ ಕ್ರಾಸ್ ರಸ್ತೆಗಳು ನಿರ್ಮಾಣವಾದ ಕೆಲವೇ ದಿನಗಳಲ್ಲಿ ಕಿತ್ತು ಹೋಗಿದ್ದವು. ಸರಿ ಪ್ರಮಾಣದ ಜಲ್ಲಿ ಸಾಮಗ್ರಿಗಳು, ಬಿಟುಮಿನ್ ಅಂಶದ ಕೊರತೆ ಮತ್ತು ಸರಿಯಾದ ಯಂತ್ರೋಪಕರಣ ಬಳಸದ ಕಾರಣ ರಸ್ತೆಗಳು ಗುಂಡಿ ಬಿದ್ದಿದ್ದವು.

ಇದನ್ನೂ ಓದಿ: ಮದ್ದೂರು | ನಮಗೆ ಮಠ ಕಟ್ಟಿಸಿಕೊಡಿ: ಮದುವೆಯಾಗಲು ಹೆಣ್ಣು ಸಿಗದ ಯುವಕರಿಂದ ಗ್ರಾ.ಪಂ.ಗೆ ಅರ್ಜಿ!

​ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ: ಕಾರ್ಯಪಾಲಕ ಇಂಜಿನಿಯರ್ ಶಿವಚಂದ್, ಎಇಇ ಬಸವರಾಜು, ಎಇ ಮಹದೇವ ಮತ್ತು ಸೂರ್ಯಕಾಂತ್ ಅವರ ಮೇಲುಸ್ತುವಾರಿಯಲ್ಲಿ ನಡೆದಿದ್ದ ಈ ಕಾಮಗಾರಿಗಳ ಬಗ್ಗೆ ಲಕ್ಷ್ಮಣ ಅವರು ಫೋಟೋ ಮತ್ತು ವೀಡಿಯೋ ಸಾಕ್ಷ್ಯಗಳ ಸಮೇತ ಲೋಕಾಯುಕ್ತಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಎದುರುದಾರ ಅಧಿಕಾರಿಗಳು ತಮ್ಮ ಸಮರ್ಥನೆ ನೀಡಿದ್ದರೂ, ತಾಂತ್ರಿಕ ತಂಡದಿಂದ ಸ್ಥಳ ಪರಿಶೀಲನೆ ನಡೆಸುವಂತೆ ಲಕ್ಷ್ಮಣ ಅವರು ಪಟ್ಟು ಹಿಡಿದಿದ್ದರು.

​ಹೋರಾಟಕ್ಕೆ ಸಂದ ಜಯ: ಈ ಕಾನೂನು ಹೋರಾಟದ ತೀವ್ರತೆಯನ್ನು ಅರಿತ ಸಂಬಂಧಪಟ್ಟ ಇಲಾಖೆಯು, ದೂರಿನಲ್ಲಿ ಉಲ್ಲೇಖಿಸಲಾಗಿದ್ದ ಮೊದಲ ರಸ್ತೆಯಾದ ‘ಮಾದನಾಯಕನಹಳ್ಳಿ-ಸಿದ್ದರಾಮೇಶ್ವರ ದೇವಸ್ಥಾನದ ರಸ್ತೆ’ಯನ್ನು ಇದೀಗ ಮರು ಡಾಂಬರೀಕರಣ ಮಾಡುವ ಮೂಲಕ ದುರಸ್ತಿಪಡಿಸಿದೆ. ಇದು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ ನಾಗರಿಕನ ಜಯವಾಗಿದ್ದು, ಉಳಿದ ಆರು ರಸ್ತೆಗಳ ಕಾಮಗಾರಿಗಳ ಬಗ್ಗೆಯೂ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಜರುಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಲಕ್ಷ್ಮಣ ಸಿ ಎಸ್ ತಿಳಿಸಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...