ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್‌ ಗೌಡ

Date:

ಮಣ್ಣಿನ ಆರೊಗ್ಯ ಹಾಗೂ ರೈತರ ಕಲ್ಯಾಣಕ್ಕಾಗಿ ಶ್ರಮಿಸಬೇಕಾದ ಸರ್ಕಾರ ರೈತರ ಹಿತ ಮತ್ತು ಮಣ್ಣಿನ ಆರೊಗ್ಯವನ್ನು ಕಡೆಗಣಿಸಿದೆ ಎಂದು ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನ್‌ ಗೌಡ ವಿಷಾದಿಸಿದರು.

- Advertisement -

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೊಂಪುರ ಗ್ರಾಮದಲ್ಲಿ ಏರ್ಪಡಿಸಿದ್ದ ಮಣ್ಣು ಉಳಿಸಿ ಅಭಿಯಾನ ಮತ್ತು ಸಂಘದ ಉದ್ಘಾಟನೆ ನೆರವೆರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬಹುರಾಷ್ಟ್ರೀಯ ಕಂಪನಿಗಳು ತಮ್ಮ ಲಾಭದ ದುರಾಸೆಯಿಂದಾಗಿ ಕೀಟನಾಶಕ, ಕಳೆನಾಶಕಗಳನ್ನು ಮಣ್ಣಿಗೆ ಸುರಿಯಲು ಅಧಿಕ ಇಳುವರಿಯ ನೆಪದಲ್ಲಿ ರೈತರನ್ನು ಪ್ರಚೋದಿಸುತ್ತಿವೆ. ಇಂತಹ ಸಮಯದಲ್ಲಿ ರೈತರ ಪರವಾಗಿ ಕಾರ್ಯನಿರ್ವಹಿಸಿ ರೈತರನ್ನು ಜಾಗೃತಗೊಳಿಸಬೇಕಾದ ಸರ್ಕಾರಗಳು ರೈತರ ಹಿತ ಮರೆತಿವೆ” ಎಂದರು.

IMG 20241201 WA0003

“ದಿನ ಕಳೆದಂತೆ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ಭೂಮಿ ಹೆಚ್ಚಾಗಲು ಸಾಧ್ಯವಿಲ್ಲ. ಬದಲಾಗಿ ಫಲವತ್ತತೆಯ ಭೂಮಿಗಳು ದಿನೇ ದಿನೆ ನಿವೇಶನಗಳಾಗಿ ಪರಿವರ್ತನೆಯಾಗುತ್ತಿವೆ. ಪರಿಸ್ಥಿತಿ ಹೀಗೆಯೆ ಮುಂದುವರೆದರೆ ಆಹಾರ ಸಮಸ್ಯೆ ಉಲ್ಬಣಿಸುವ ಸಮಯ ಸಮೀಪಿಸುತ್ತದೆ” ಎಂದರು.

“ಸರ್ಕಾರಗಳು ರೈತರ ಕಲ್ಯಾಣ ಮರೆತು ಉದ್ಯಮಿಗಳ ಹಿತ ರಕ್ಷಿಸುತ್ತಿರುವ ಈ ಹೊತ್ತಿನಲ್ಲಿ ರೈತರು ವೈಯಕ್ತಿಕವಾಗಿ ತಮ್ಮ ಜಮೀನುಗಳಲ್ಲಿ ರಸಾಯನಿಕ ಬಳಕೆ ಮಾಡದಿರುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಿ ತಮ್ಮ ಭೂಮಿಯ ಫಲವತ್ತತೆಯ ಹೆಚ್ಚಳ ಮಾಡಿ ಮುಂದಿನ ಪೀಳಿಗೆಗೆ ಆರೊಗ್ಯಕರ ಮಣ್ಣು ವರ್ಗಾಯಿಸಿ ಸುಸ್ಥಿರ ಕೃಷಿಗೆ ಶ್ರಮಿಸಬೇಕು. ಇದಕ್ಕೆ ಬೇಕಾದ ಮಾರ್ಗದರ್ಶನ ಮಾಡುವಲ್ಲಿ ಕಲ್ಯಾಣ ರೈತಸಂಘ ಜೊತೆಗಿರಲಿದೆ” ಎಂದು ಚಂದನ್‌ಗೌಡ ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಕೆಆರ್‌ಪೇಟೆ | ವಾಟ್ಸಾಪ್ ಯುನಿವರ್ಸಿಟಿ ತಿರುಚಿದ ಇತಿಹಾಸ ಹೇಳುತ್ತಿದೆ: ಪ್ರೊ ಎಸ್ ಜಿ ಸಿದ್ದರಾಮಯ್ಯ

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಉಷಾಜಯಶೀಲ್ ಮಾತನಾಡಿ, ಮಣ್ಣಿನ ಆರೊಗ್ಯ ಹಾಗೂ ರೈತರ ಕಲ್ಯಾಣ ನಮ್ಮ ಸಂಘದ ಧ್ಯೇಯಾವಾಗಿದೆ. ಅದಕ್ಕಾಗಿ ರೈತರ ಸಂಘಟನೆ, ರೈತರ ಜಾಗೃತಿ ಮತ್ತು ಮಾಹಿತಿ ನೀಡುವುದು ನಮ್ಮ ಸಂಘದ ಕಾರ್ಯಸೂಚಿಯಾಗಿದ್ದು, ರಾಜ್ಯದ್ಯಾಂತ ರೈತರನ್ನು ಸಂಘಟಿಸಲಾಗುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಸೊಂಪುರ ಗ್ರಾಮದಲ್ಲಿನ ಸಭೆ ಪ್ರಥಮವಾದುದ್ದಾಗಿದೆ” ಎಂದರು.

ನಗರಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವ್ ಮಾತನಾಡಿ, “ಮಣ್ಣಿನ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತ ರೈತ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ರೈತ ಕಲ್ಯಾಣ ಸಂಘಟನೆ ಮಾರ್ಗದರ್ಶನದಲ್ಲಿ ಮಣ್ಣಿನ ಸ್ವಾಸ್ಥ್ಯ ಕಾಯುವಲ್ಲಿ ಮುಂದಾಗೋಣ” ಎಂದರು.

ಮಂಡ್ಯ ಜಿಲ್ಲಾಧ್ಯಕ್ಷ ದೇವು ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...