ಮದ್ದೂರು ನಗರಸಭೆಗೆ ಗ್ರಾ.ಪಂ ಸೇರ್ಪಡೆ: ಅಜೆಂಡಾ ಇಲ್ಲದ ನಿರ್ಧಾರಕ್ಕೆ ಪ್ರತಿಭಟನಾಕಾರರ ಆಕ್ರೋಶ

Date:

​ಮದ್ದೂರು ನಗರಸಭೆಗೆ ನಾಲ್ಕು ಗ್ರಾಮ ಪಂಚಾಯಿತಿಗಳನ್ನು ಸೇರ್ಪಡೆಗೊಳಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಳೆದ 51 ದಿನಗಳಿಂದ ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾಮ ಪಂಚಾಯಿತಿಗಳ ಮುಂದೆ ನಡೆಯುತ್ತಿದ್ದ ನಿರಂತರ ಧರಣಿಯ ಹಿನ್ನೆಲೆಯಲ್ಲಿ, ಸಚಿವ ಎನ್ ಚಲುವರಾಯಸ್ವಾಮಿಯವರು ಮದ್ದೂರು ಪ್ರವಾಸಿ ಮಂದಿರದಲ್ಲಿ ಹೋರಾಟಗಾರರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ವೇಳೆ ಅಜೆಂಡಾವಿಲ್ಲ ನಿರ್ಧಾರಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

- Advertisement -

​ದಾಖಲೆ ಸಮೇತ ಸರ್ಕಾರದ ​ಸಭೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ರೈತ ಹೋರಾಟಗಾರ್ತಿ ಸುನಂದಮ್ಮ ಮತ್ತು ಗ್ರಾಮಸ್ಥರು, ನಗರಸಭೆಗೆ ಪಂಚಾಯಿತಿಗಳನ್ನು ಸೇರಿಸುವ ನಿರ್ಧಾರವು ಪ್ರಜಾಸತ್ತಾತ್ಮಕವಾಗಿ ನಡೆದಿಲ್ಲವೆಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಚಿವರ ಮುಂದೆ ಪುರಾವೆಗಳನ್ನು ಮಂಡಿಸಿದ ಅವರು, ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿದರು. ಅವುಗಳೆಂದರೆ ʼಗ್ರಾಮ ಪಂಚಾಯಿತಿಗಳಲ್ಲಿ ಅಜೆಂಡಾ ಇಡದೆ, ವಾರ್ಡ್ ಸಭೆ ಅಥವಾ ಗ್ರಾಮ ಸಭೆಗಳ ಮೂಲಕ ಜನರ ಅನಿಸಿಕೆಯನ್ನು ಪಡೆಯದೆ ಏಕಪಕ್ಷೀಯವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರಸಭೆ ವ್ಯಾಪ್ತಿಗೆ ಸೇರಿದರೆ ಸುಮಾರು 5,000 ಎಕರೆಗಳಷ್ಟು ಹಸಿರು ವಲಯದ ಕೃಷಿ ಭೂಮಿ ನಾಶವಾಗುವ ಭೀತಿ ಇದೆ. ಈಗಾಗಲೇ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರು ತೃಪ್ತಿಕರ ಸೌಲಭ್ಯಗಳನ್ನು ಪಡೆಯುತ್ತಿದ್ದು, ನಗರಸಭೆಗೆ ಸೇರ್ಪಡೆಯಾದಲ್ಲಿ ಸಾಮಾನ್ಯ ಜನರ ಬದುಕು ದುಸ್ತರವಾಗಲಿದೆʼ ಎಂದು ಸಭೆಗೆ ಮಾಹಿತಿ ನೀಡಿದರು.

​ಹೋರಾಟಗಾರರ ತರ್ಕಬದ್ಧ ವಾದ ಮತ್ತು ದಾಖಲೆಗಳನ್ನು ಗಮನಿಸಿದ ಸಚಿವ ಚಲುವರಾಯಸ್ವಾಮಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಈ ಮೊದಲು ನಾಲ್ಕು ಗ್ರಾಮ ಪಂಚಾಯಿತಿಗಳನ್ನು ನಗರಸಭೆ ವ್ಯಾಪ್ತಿಗೆ ಸೇರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಇದೀಗ ಗೆಜ್ಜಲಗೆರೆ ಮತ್ತು ಗೊರವನಹಳ್ಳಿ ಗ್ರಾಮ ಪಂಚಾಯಿತಿಗಳು ಈ ನಿರ್ಧಾರವನ್ನು ಬಲವಾಗಿ ವಿರೋಧಿಸುತ್ತಿವೆ. ಜನರ ಒತ್ತಾಯ ಹಾಗೂ ಪ್ರತಿಭಟನೆಯ ತೀವ್ರತೆಯನ್ನು ಗಮನಿಸಿರುವ ಸರ್ಕಾರವು, ಈ ಬಗ್ಗೆ ಮತ್ತೊಮ್ಮೆ ಕಾನೂನಾತ್ಮಕವಾಗಿ ಪರಾಮರ್ಶೆ ನಡೆಸಲು ನಿರ್ಧರಿಸಿದೆ” ಎಂದು ಸ್ಪಷ್ಟಪಡಿಸಿದರು.

​”ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿರುವುದರಿಂದ ಕಾನೂನು ಚೌಕಟ್ಟಿನೊಳಗೆ ಏನು ಮಾಡಲು ಸಾಧ್ಯ ಎಂಬುದರ ಕುರಿತು ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಇಲಾಖಾ ಸಚಿವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರದ ಮುಂದಿನ ನಡೆ ತಿಳಿಯುವವರೆಗೆ ಸಮಾಧಾನದಿಂದ ಕಾಯಬೇಕು. ಅಲ್ಲಿಯವರೆಗೆ ಸಾರ್ವಜನಿಕರು ಶಾಂತಿ ಕಾಪಾಡಬೇಕು ಮತ್ತು ತಮ್ಮ ತೀವ್ರ ಸ್ವರೂಪದ ಪ್ರತಿಭಟನೆಗಳನ್ನು ಹಿಂಪಡೆಯಬೇಕು” ಎಂದು ಗ್ರಾಮಸ್ಥರಲ್ಲಿ ಕೋರಿದರು.

ಈ ಸುದ್ದಿ ಓದಿದ್ದೀರಾ? ಕರಾವಳಿಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವಂತೆ ಜನಪ್ರತಿನಿಧಿಗಳ ಆಗ್ರಹ

​ಸಚಿವರ ಭರವಸೆಯ ಮೇರೆಗೆ ಧರಣಿನಿರತರು ತಮ್ಮ ತೀವ್ರ ಸ್ವರೂಪದ ಚಳವಳಿಯನ್ನು ಸ್ವಲ್ಪಮಟ್ಟಿಗೆ ತಗ್ಗಿಸಲು ನಿರ್ಧರಿಸಿದ್ದಾರಾದರೂ, ಸರ್ಕಾರ ಅಧಿಕೃತವಾಗಿ ಆದೇಶ ಹಿಂಪಡೆಯುವವರೆಗೂ ನಿರಂತರ ಧರಣಿ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.

​ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಶಾಸಕ ಉದಯ್, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ರೈತ ಸಂಘದ ಶಂಕರಣ್ಣ, ಲಿಂಗಪ್ಪಾಜಿ, ಜಿಎಚ್ ವೀರಪ್ಪ, ಬಿಟಿ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಆತ್ಮನಂದ, ಪ್ರಸನ್ನ ಗೊರವನಹಳ್ಳಿ ಹಾಗೂ ಹಲವು ಹೋರಾಟಗಾರರು, ಗ್ರಾಮಸ್ಥರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...