ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದ್ದು, ಈ ವೇಳೆ ಯುವತಿಯೊಬ್ಬರ ಮೇಲೆ ಪೊಲೀಸ್ ಕಾನ್ಸ್ಟೆಬಲ್ ಲಾಠಿಯಿಂದ ಬಲವಾಗಿ ಹೊಡೆದಿದ್ದಾರೆಂಬ ಆರೋಪ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಗಲಾಟೆಗೆ ಸಂಬಂಧಿಸಿದಂತೆ ಬಿಜೆಪಿ, ಹಿಂದೂ ಸಂಘಟನೆಗಳ ಯುವಕ, ಯುವತಿಯರು ಮತ್ತು ಮಹಿಳೆಯರೂ ಕೂಡ ಪ್ರತಿಭಟನೆಯಲ್ಲಿ ಭಾಗಿದ್ದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನಡೆದ ವಾಗ್ವಾದ ತೀವ್ರಗೊಂಡಿದ್ದರಿಂದ ಪೊಲೀಸರು ಲಾಠಿ ಬೀಸಿದ್ದಾರೆ.
ಲಾಠಿಯ ಏಟಿಗೆ ಭಯಬಿದ್ದ ಯುವತಿ ರಸ್ತೆ ಮೇಲೆಯೇ ಕಿರುಚಾಡಿ, ಗೋಗರೆದಿದ್ದಾಳೆ. ರಸ್ತೆ ಮೇಲೆ ಕುಳಿತು ಒದ್ದಾಡಿದ್ದಾಳೆ. ಸದ್ಯ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದ ಕಾರಣ ಪೊಲೀಸರು ಫುಲ್ ಅಲರ್ಟ್ ಆಗಿ ಸ್ಥಳದಲ್ಲಿ ನಿಗಾವಹಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮದ್ದೂರು ಕಲ್ಲು ತೂರಾಟ | ಎರಡು ಪ್ರಕರಣ ದಾಖಲು, 21 ಜನರ ಬಂಧನ: ಮಂಡ್ಯ ಎಸ್ಪಿ ಬಾಲದಂಡಿ
ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ಪೊಲೀಸರು ಜಾಗೃತರಾಗಿದ್ದು, ಮಧ್ಯರಾತ್ರಿಯೇ 21ಕ್ಕೂ ಅಧಿಕ ಮಂದಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.