ಮಂಡ್ಯ ಜಿಲ್ಲೆಯ ಮದ್ದೂರು ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದ್ದು, ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ.
ಮದ್ದೂರು ನಗರದಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಆದರೆ ಮದ್ದೂರಿನಲ್ಲಿ ಪೊಲೀಸ್ ಬಂದೋ ಬಸ್ತ್ ಮುಂದುವರೆದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಆರೋಪ: ಸಿ ಟಿ ರವಿ ವಿರುದ್ಧ ಸುವೋ ಮೋಟೋ ಪ್ರಕರಣ ದಾಖಲು
ಭಾನುವಾರ ರಾತ್ರಿ ಮದ್ದೂರಿನ ರಾಮ್ ರಹೀಮ್ ನಗರ ಮಸೀದಿ ಮುಂಭಾಗದ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸೋಮವಾರ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದವು. ಬುಧವಾರ ಬಿಜೆಪಿ ನಾಯಕರು ಸೇರಿದಂತೆ ಮದ್ದೂರಿನ ಜನತೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಸಿದ್ದರು.