ಇ-ಕಚೇರಿ ತಂತ್ರಾಂಶವನ್ನು ಸರಿಯಾಗಿ ಅನುಷ್ಟಾನಗೊಳಿಸದೇ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಮದ್ದೂರಿನ ಶಿರಸ್ತೇದಾರ್ ಚಂದ್ರಶೇಖರ್ ಎಂ ಅವರನ್ನು ಅಮಾನತು ಮಾಡಲಾಗಿದೆ. ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಎಚ್.ಎಂ ಸುದರ್ಶನ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಕಚೇರಿಗೆ ಜನವರಿ 17ರಂದು ದಿಢೀರ್ ಭೇಟಿ ನೀಡಿದ್ದರು. ಆ ವೇಳೆ, ಇ-ಆಫೀಸ್‌ಗೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಿದ್ದರು. ಆದರೆ, ಇ-ಆಫೀಸ್ ತಂತ್ರಾಂಶವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಟಾನಗೊಳಿಸದೇ ಇರುವುದು ಕಂಡುಬಂತಿತ್ತು.
ಆದರೆ, ಈ ಹಿಂದೆ, ಕಚೇರಿಯ ಕಂದಾಯ ವಿಭಾಗದಲ್ಲಿ ಪೂರ್ಣ ಪ್ರಮಾಣದಲ್ಲಿ ತಂತ್ರಾಂಶವನ್ನು ಅನುಷ್ಟಾನ ಮಾಡಿರುವುದಾಗಿ ಆಡಳಿತ ಶರಸ್ತೇದಾರ್ ಚಂದ್ರಶೇಖರ್ ಅವರು ತಪ್ಪು ಮಾಹಿತಿ ನೀಡಿದ್ದರು. ತಪ್ಪು ಮಾಹಿತಿ ಮತ್ತು ಕರ್ತವ್ಯಲೋಪದ ಆರೋಪದಲ್ಲಿ ಅವರನ್ನು ಅಮಾನತು ಮಾಡಲಾಗಿದೆ.