ಮಧುಗಿರಿ | ಸಿ ಎಂ ಗೆ ಮಸಿಬಳಿಯುವ ಪ್ರಯತ್ನ : ರಾಜ್ಯಪಾಲರ ನಡೆಗೆ ಆರ್. ರಾಜೇಂದ್ರ ಆಕ್ರೋಶ

Date:

ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರು ಹಾಗೂ ವಿಪಕ್ಷಗಳಿಗೆ ಬುದ್ಧಿ ಕಲಿಸುವ ಕಾಲ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು.

- Advertisement -

ಮಧುಗಿರಿ ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯಪಾಲರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪ ಮಾಡಿ ತಪ್ಪಿತಸ್ಥ ಎಂದು ಬಿಂಬಿಸಲು ಬಿಜೆಪಿಯವರು ರಾಜ್ಯಪಾಲರನ್ನು ಬಳಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರ ಮಾರ್ಗದರ್ಶನದಲ್ಲಿ ಇಡೀ ರಾಜ್ಯದಲ್ಲಿ ಇಂದು ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪಕ್ಷಪಾತ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು ದೂರುದಾರರು ಅರ್ಜಿ ಕೊಟ್ಟಾಕ್ಷಣ ಮುಖ್ಯಮಂತ್ರಿಗಳಿಗೆ ನೋಟಿಸ್ ನೀಡಿದ್ದಾರೆ. ಉನ್ನತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿದರೆ ತನಿಕಾ ಸಂಸ್ಥೆಗಳ ಮೂಲಕ ತನಿಖೆ ನಡೆಸಿ ನೋಟಿಸ್ ನೀಡಬೇಕು. ಇಂತಹ ರಾಜ್ಯಪಾಲರನ್ನು ಬಳಸಿಕೊಂಡು ಮುಖ್ಯಮಂತ್ರಿಗಳಿಗೆ ಮಸಿ ಬಳೆಯಲು ಹೊರಟಿದ್ದು, ಅದನ್ನು ಖಂಡಿಸುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಎಲ್ಲ ವರ್ಗದ ಬಡವರ ಪರ ಕೆಲಸ ಮಾಡುತ್ತಿರುವ ಹಗರಣ ರಹಿತ ಮುಖ್ಯಮಂತ್ರಿಗಳಿಗೆ ಶಕ್ತಿ ತುಂಬಲು ಇಂದು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಹಸ್ರ ಸಂಖ್ಯೆಯಲ್ಲಿ ಸೇರಿದ್ದಾರೆ. 1998 ರಲ್ಲೇ ಮುಡಾ ಬೈಲಾ ಪ್ರಕಾರ ಸಿದ್ದರಾಮಯ್ಯನವರು ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಜಿ.ಟಿ ದೇವೇಗೌಡ ಮತ್ತು ಎಚ್. ಡಿ ದೇವೇಗೌಡ ಕುಟುಂಬದವರು ಕೂಡ ಮುಡಾದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನಿವೇಶನಗಳನ್ನು ಪಡೆದಿದ್ದು, ಇಂದು ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು .

ಜಿ. ಪಂ. ಮಾಜಿ ಸದಸ್ಯೆ ಶಾಂತಲಾ ರಾಜಣ್ಣ ಮಾತನಾಡಿ 40 ವರ್ಷಗಳ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕಿ ಇಲ್ಲದ ರಾಜಕಾರಣಿಯಾಗಿರುವ ಸಿದ್ದರಾಮಯ್ಯನವರನ್ನು ಕುತಂತ್ರದಿಂದ ಸಿಕ್ಕಿಹಾಕಿಸಲು ಬಿಜೆಪಿ- ಜೆಡಿಎಸ್ ನವರು ಪಿತೂರಿ ನಡೆಸಿದ್ದಾರೆ. ರಾಜ ಭವನ ಎಂದರೆ ಕಾನೂನು ಪರಿಪಾಲನೆ ಮಾಡುವ ಕೇಂದ್ರವಾಗಿದೆ. ಈಗಿನ ರಾಜ್ಯಪಾಲರು ಕಾನೂನಿನ ಬಗ್ಗೆ ತಿಳುವಳಿಕೆ ಇಲ್ಲದವರಂತೆ ವರ್ತಿಸುತ್ತಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಂಡು ನೂತನ ರಾಜ್ಯಪಾಲರನ್ನು ರಾಜ್ಯಕ್ಕೆ ನೇಮಕ ಮಾಡಲಿ ಎಂದು ಆಗ್ರಹಿಸಿದರು.

ಮಧುಗಿರಿ ಪಟ್ಟಣದ ಡಾ.ಬಿ. ಆರ್. ಅಂಬೇಡ್ಕರ್ ವೃತ್ತದಿಂದ ನೂರಾರು ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕುರಿಕೊಂಡು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್. ಗೋಪಾಲಯ್ಯ, ಆದಿ ನಾರಾಯಣ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಎನ್. ಗಂಗಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ನಾಗೇಶ್ ಬಾಬು, ಮುಖಂಡರುಗಳಾದ ಎಂ. ಎಸ್. ಮಲ್ಲಿಕಾರ್ಜುನಯ್ಯ, ಟಿ. ರಾಮಣ್ಣ, ಪಿ. ಸಿ. ಕೃಷ್ಣಾರೆಡ್ಡಿ, ಮಿಡಿಗೇಶಿ ರಾಜಗೋಪಾಲ್, ಆರ್. ಕೆ. ಧ್ರುವ ಕುಮಾರ್, ಶಫೀಕ್, ಸಿದ್ದಾಪುರ ರಂಗ ಶಾಮಣ್ಣ, ಚಂದ್ರಮ್ಮ, ಇಂದಿರಾ ದೇನಾ ನಾಯಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕುಡಿಯುವ ನೀರಿನ ಸಮಸ್ಯೆ : ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ, ಇಂದೇ ಪರಿಹಾರಕ್ಕೆ ಸೂಚನೆ

 ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು. ನೀರಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ತುಮಕೂರು | ಪದವಿಯೊಂದೇ ಸಾಲದು, ಉದ್ಯಮದ ಬೇಡಿಕೆಗೆ ತಕ್ಕ ಕೌಶಲ ಬೆಳೆಸಿಕೊಳ್ಳಿ : ವಿನಾಯಕ್ ಅಂಬರೀಷ್

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪಡೆದುಕೊಂಡರೆ ಸಾಲದು. ಉದ್ಯಮ ಕ್ಷೇತ್ರದ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...