ರಾತ್ರಿ ವೇಳೆ ಮಹಿಳೆಯೊಬ್ಬರ ಮೇಲೆ ಎರಡು ಕರಡಿಗಳು ದಾಳಿ ಮಾಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುಲಮಾಚಿ ಗ್ರಾಮದಲ್ಲಿ ನಡೆದಿದೆ.
ಕಳೆದ ಶನಿವಾರ (ಫೆ.1) ರಾತ್ರಿ ಗ್ರಾಮದ ಲಕ್ಷ್ಮಮ್ಮ ತಮ್ಮ ಮನೆಯ ಸಮೀಪ ಬಹಿರ್ದೆಸೆಗೆಂದು ತೆರಳಿದ್ದರು. ಆಗ ಎರಡು ಕರಡಿಗಳು ಏಕಾಏಕಿ ದಾಳಿ ನಡೆಸಿವೆ. ಮಹಿಳೆಯ ದೇಹದ ಕೆಲ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಲಕ್ಷ್ಮಮ್ಮ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಉಪವಲಯ ಅರ್ಣ್ಯಾಧಿಕಾರಿ ಮುತ್ತುರಾಜು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?: ರಾಸಲೀಲೆ ಪ್ರಕರಣ | ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪಗೆ 14 ನ್ಯಾಯಾಂಗ ಬಂಧನ
