ಮಧುಗಿರಿ | ಚನ್ನಗಿರಿಪಾಳ್ಯದ ಸ್ಮಶಾನ ಭೂಮಿ ಸಮಸ್ಯೆ : ಸ್ಥಳಕ್ಕೆ ಡಿಸಿ ಭೇಟಿ, ಪರಿಶೀಲನೆ

Date:

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಗುರುವಾರ ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಬಟಗೆರೆ ಗ್ರಾಮದ ಮಜರೆ ಗ್ರಾಮವಾದ ಚನ್ನಗಿರಿಪಾಳ್ಯ ಗ್ರಾಮದ ಸ್ಮಶಾನ ಭೂಮಿಯ ಬೇಡಿಕೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

 ಈ ಸಂದರ್ಭದಲ್ಲಿ ಚನ್ನಗಿರಿಪಾಳ್ಯದ ಗ್ರಾಮಸ್ಥರು ಬಟಗೆರೆ ಗ್ರಾಮದ ಸರ್ವೆ ನಂಬರ್ 71ರಲ್ಲಿ ಸುಮಾರು 2 ಎಕರೆ ಜಮೀನನ್ನು ಹಲವು ವರ್ಷಗಳ ಹಿಂದೆ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಮನೆ ನಿರ್ಮಿಸಿಕೊಡುವ ಉದ್ದೇಶದಿಂದ ಕಾಯ್ದಿರಿಸಲಾಗಿತ್ತು. ಆದರೆ ವರ್ಷಗಳು ಕಳೆದರೂ ಈ ಜಮೀನಿನಲ್ಲಿ ಯಾವುದೇ ಮನೆಗಳು ನಿರ್ಮಾಣವಾಗಿಲ್ಲ, ಇದರ ನಡುವೆ ಚನ್ನಗಿರಿಪಾಳ್ಯವನ್ನು ಕಂದಾಯ ಗ್ರಾಮವನ್ನಾಗಿ ಮಾಡುವ ಉದೇಶವನ್ನು ಹೊಂದಿದ್ದು, ಗ್ರಾಮಸ್ಥರಿಗೆ ಅಂತ್ಯಸAಸ್ಕಾರ ಮಾಡಲು ಸ್ಮಶಾನದ ಜಾಗವಿಲ್ಲದೆ ತೊಂದರೆಯಾಗುತ್ತಿದೆ. ಹಾಗಾಗಿ ಆಶ್ರಯ ಯೋಜನೆಗೆ ಬಳಕೆಯಾಗದ ಜಮೀನನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಿಕೊಡಬೇಕೆಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಇಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೇಡಿಕೆಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಚನ್ನಗಿರಿಪಾಳ್ಯವನ್ನು ಕಂದಾಯ ಗ್ರಾಮವನ್ನಾಗಿ ಮಾಡುವ ಪ್ರಸ್ತಾವನೆ ಈಗಾಗಲೇ ಪ್ರಕ್ರಿಯೆಯಲ್ಲಿದೆ. ಹೊಸ ಕಂದಾಯ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಜೊತೆಗೆ ಸ್ಮಶಾನದ ಅಗತ್ಯತೆ ಬಹಳಷ್ಟಿದೆ. ಗ್ರಾಮಸ್ಥರ ಈ ಬೇಡಿಕೆಯ ಬಗ್ಗೆ ಪರಿಶೀಲಿಸಿ, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಂತರ ಬಟಗೆರೆ ಗ್ರಾಮದಲ್ಲಿ ಈಗಾಗಲೇ ಸ್ಮಶಾನಕ್ಕಾಗಿ ಮೀಸಲಿಟ್ಟಿರುವ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸ್ಮಶಾನದ ಆವರಣವು ಸರಿಯಾದ ನಿರ್ವಹಣೆ ಇಲ್ಲದೆ ಇರುವುದನ್ನು ಗಮನಿಸಿ, ತಕ್ಷಣವೇ ಅಭಿವೃದ್ಧಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ಸ್ಮಶಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು, ಅಂತ್ಯಸಂಸ್ಕಾರಕ್ಕೆ ಬರುವವರಿಗೆ ಅನುಕೂಲವಾಗುವಂತೆ ನೀರಿನ ವ್ಯವಸ್ಥೆ ಕಲ್ಪಿಸುವುದು, ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವುದು ಹಾಗೂ ಸ್ಮಶಾನದ ಗುರುತಿಗಾಗಿ ಅಧಿಕೃತ ನಾಮಫಲಕ ಅಳವಡಿಸಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಅವರಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದೇ ಸಂದರ್ಭ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಪ್ರಭಾರ ತಹಶೀಲ್ದಾರ್ ರವಿ ವೈ., ಎಡಿಎಲ್‌ಆರ್ ಮಂಜುನಾಥ್, ಸ್ಥಳೀಯ ಮಟ್ಟದ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...