ಮಧುಗಿರಿ | ದಲಿತ ಯುವಕನಿಗೆ ದೇವಾಲಯ ಪ್ರವೇಶ ನಿರಾಕರಣೆ; ವಿಡಿಯೋ ವೈರಲ್

Date:

ದೇವಾಲಯ ಪ್ರವೇಶಸಿದ್ದಕ್ಕೆ ಪರಿಶಿಷ್ಟ ಜಾತಿಯ ಯುವಕನೊಬ್ಬನನ್ನು ದೇವಾಲಯದಿಂದ ಹೊರ ಹಾಕಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿ ಕವಣದಾಲ ಗ್ರಾಮದಲ್ಲಿ ನಡೆದಿದೆ.

- Advertisement -

ಶನಿವಾರ ಸಂಜೆ ಯುವಕ ಸ್ವಾಮಿನಾಥ್ ಪೂಜೆ ಮಾಡಿಸಲೆಂದು ಗ್ರಾಮದಲ್ಲಿರುವ ರಾಮಾಂಜನೇಯ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ಸ್ಥಳದಲ್ಲಿದ್ದ ಒಕ್ಕಲಿಗ ಸಮುದಾಯದವರು ಯುವಕನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಅನಾದಿ ಕಾಲದಿಂದ ನಿಮ್ಮ ಜಾತಿಯವರು (ಪರಿಶಿಷ್ಟ ಜಾತಿಯವರು) ದೇಗುಲದ ಒಳಗೆ ಬಂದಿಲ್ಲ. ಈಗಲೂ ಬರುವುದು ಬೇಡ. ನೀನ್ಯಾಕೆ ಬಂದೆ? ಎಂದು ಹೊರ ನಡೆಯಲು ತಾಕೀತು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಕುರಿತು ಯುವಕ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

“ಊರಿನ ಜನರೆಲ್ಲ ಒಳಗಡೆ ಕುಳಿತಿರುವಾಗ ನಾನೇಕೆ ಹೊರಗಡೆ ನಿಲ್ಲಬೇಕು. ಒಳಗಡೆ ಹೋಗಿದ್ದು ತಪ್ಪು ಹೇಗಾಗುತ್ತದೆ? ನೀವು ಒಳಗೆ ಹೋಗುವುದಾದರೇ ನಾನೇಕೆ ಹೋಗಬಾರದು? ಸಂವಿಧಾನಕ್ಕೆ ಗೌರವ ಇಲ್ಲವೆ?” ಎಂದು ಯುವಕ ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೇರೆಯಾಗಿದೆ.

ಆಗ ಸ್ಥಳೀಯರು ನಿಮ್ಮವರು (ಪರಿಶಿಷ್ಟ ಜಾತಿ) ಯಾರು ಒಳಗೆ ಬಂದಿಲ್ಲ. ಒಬ್ಬರಿಗೆ ಹೇಳಿದರೆ ಉಳಿದವರು ಅರ್ಥ ಮಾಡಿಕೊಳ್ಳಬೇಕು. ನೀನು ಒಳಗಡೆ ಹೋಗಬೇಡ ಎಂದು ಆಗ್ರಹಿಸಿದ್ದಾರೆ. ಇದರಿಂದ ಕೆಲ ವೇಳೆ ದೇವಾಲಯದ ಬಳಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ಓದಿ: ರಾಸಲೀಲೆ ಪ್ರಕರಣ | ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ನ್ಯಾಯಾಂಗ ಬಂಧನ

ಘಟನೆ ಸಂಬಂಧ ಯುವಕ ಭಾನುವಾರ ಬಡವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಗ್ರಾಮಸ್ಥರ ಒತ್ತಾಯದ ಮೇರೆಗೆ ದೂರು ವಾಪಸ್ ಪಡೆದಿದ್ದಾರೆ. ಈ ಬೆಳೆವಣಿಗೆ ನಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಲ್ ಡಿವೖಎಸ್‌ಪಿ ಮಂಜುನಾಥ್, ತಹಶೀಲ್ದಾರ್ ಶಿರೀನ್ ತಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್ ಅವರು ಸ್ಥಳಕ್ಕೆ ಭೇಟಿನೀಡಿ ಶಾಂತಿಸಭೆ ನಡೆಸಿದರು. ಶಾಂತಿಸಭೆಯಲ್ಲಿ ಸಂತ್ರಸ್ತ ಯುವಕ, ಒಕ್ಕಲಿಗ ಸಮುದಾಯದವರು ಹಾಗೂ ಗ್ರಾಮಸ್ಥರು ಇದ್ದರು.

ಮುಂದಿನ ದಿನಗಳಲ್ಲಿ ದೇವಸ್ಥಾನ ಪ್ರಶೇಶಿಸಲು ಯಾರಿಗೂ ಅಡ್ಡಿಪಡಿಸಬಾರದು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...