ಮಧುಗಿರಿ | ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಕಾಮುಕ ಡಿವೈಎಸ್‌ಪಿ ಬಂಧನ

Date:

ದೂರು ನೀಡಲು ಕಚೇರಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್‌ಪಿ, ಆರೋಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

- Advertisement -

ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಿದ್ದ ಪಾವಗಡ ತಾಲೂಕಿನ ಮಹಿಳೆಗೆ ಡಿವೈಎಸ್‌ಪಿ ರಾಮಚಂದ್ರಪ್ಪ ತಮ್ಮ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದರು. ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು. ಡಿವೈಎಸ್‌ಪಿ ಎಸಗಿದ್ದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಮಚಂದ್ರಪ್ಪ ಪರಾರಿಯಾಗಿದ್ದರು. ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಡಿವೈಎಸ್‌ಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ, ಅವರನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಅಲ್ಲದೆ, ಆರೋಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಬಿಎನ್‌ಎಸ್‌ ಸೆಕ್ಸನ್ 68, 75, 79 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...