ಮಧುಗಿರಿ | ರಾಜಣ್ಣಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಯಾದವ ಯುವ ವೇದಿಕೆ ಒತ್ತಾಯ

Date:

Advertisements

 ಶಾಸಕ  ಕೆ.ಎನ್. ರಾಜಣ್ಣನವರನ್ನು ಯಾವುದೇ ತಿಳುವಳಿಕೆ ನೀಡದೆ ಕಾಂಗ್ರೆಸ್ ಹೈ ಕಮಾಂಡ್ ಏಕಾಏಕಿ ಸಂಪುಟದಿಂದ ವಜಾ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಸಿದ್ದಾಪುರ ಗ್ರಾ.ಪಂ ಮಾಜಿ ಅಧ್ಯಕ್ಷ, ಸದಸ್ಯ ಸಿದ್ದಾಪುರ ವೀರಣ್ಣ ತಿಳಿಸಿದರು. 

ಮಧುಗಿರಿ ಪಟ್ಟಣದ ಕನ್ನಡ ಭವನದಲ್ಲಿರುವ ಕೆ.ಎನ್. ರಾಜಣ್ಣನವರ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಯಾದವ ಯುವ ವೇದಿಕೆಯ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ತಳ ಸಮುದಾಯದ ಜನರನ್ನು ಗುರುತಿಸಿ ರಾಜಕೀಯ ಅಧಿಕಾರ ನೀಡುವುದರಲ್ಲಿ ರಾಜಣ್ಣನವರು ಪ್ರಮುಖರು. ಈ ಹಿಂದೆ ಜಿಲ್ಲೆಯಲ್ಲಿ ರಾಜಣ್ಣನವರು ಕಾಂಗ್ರೆಸ್ ನಲ್ಲಿ ಇಲ್ಲದ ಸಂದರ್ಭದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಮಾತ್ರ ಗಳಿಸಿತ್ತು. ಅವರು ಜಿಲ್ಲೆಯ ಶಕ್ತಿಯಾಗಿದ್ದು, ಅವರನ್ನು ಮತ್ತೆ ಶೀಘ್ರವಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಇಲ್ಲದಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ತೀವ್ರವಾಗಿ ನೆಲ ಕಚ್ಚುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಉಪನ್ಯಾಸಕ ಚಿತ್ತಯ್ಯ ಮಾತನಾಡಿ ಕೆ.ಎನ್. ರಾಜಣ್ಣನವರನ್ನು  ಷಡ್ಯಂತ್ರ ರೂಪಿಸಿ ಸಚಿವ ಸ್ಥಾನದಿಂದ ವಜಾ ಮಾಡಿರುವುದು ಖಂಡನೀಯ. ಕಾಂಗ್ರೆಸ್ ಹೈ ಕಮಾಂಡ್ ಇದರ ಬಗ್ಗೆ ಪರಿಶೀಲಿಸಿ ಅವರನ್ನು ಮತ್ತೆ ಸಂಪುಟಕ್ಕೆ ಮರು ಸೇರ್ಪಡೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲೂಕಿನ ಗೊಲ್ಲ ಸಮುದಾಯದ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು

ಕೆಡಿಪಿ ಸದಸ್ಯೆ  ಜಯಲಕ್ಷ್ಮಿ ಮಾತನಾಡಿ ರಾಜಣ್ಣನವರನ್ನು ಯಾವ ಕಾರಣದಿಂದ ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಜಗತ್ತಿಗೆ ತಿಳಿಸಬೇಕು. ವಜಾಗೊಳಿಸಿರುವ ಬಗ್ಗೆ ಯಾವುದೇ ಶಾಸಕರು, ಸಂಸದರು ಏಕೆ ಪ್ರಶ್ನಿಸುತ್ತಿಲ್ಲ ಎಂದರು.

 ಸಿಂಡಿಕೇಟ್ ಸದಸ್ಯರಾದ ಶಿವಣ್ಣ ಪದವೀಧರ ವೇದಿಕೆ ಅಧ್ಯಕ್ಷರಾದ ದಯಾನಂದ ಪುಲಮಾಚಿ ಚಿತ್ತಪ್ಪ, ಶಿವಾನಂದ್, ಶಿವರಾಜು, ಗೋವಿಂದರಾಜು, ರವಿ, ಕುಮಾರ್, ಸುಂದರೇಶ್, ಅಂಬರೀಶ್, ಶಿವಲಿಂಗಯ್ಯ, ರಘು, ನಾಗೇಶ್ ಹಾಗೂ ತಾಲ್ಲೂಕಿನ ಯಲ್ಲಾ ಗೊಲ್ಲರಹಟ್ಟಿ ಇಂದ ಆಗಮಿಸಿದಂತಹ ಯುವಕರು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X