ಮಡಿಕೇರಿ | ಬಸವಾದಿ ಶರಣರ ವಚನಗಳೇ ಸಂವಿಧಾನ ರಚನೆಗೆ ಮೂಲ ಆಧಾರವಾಯಿತು: ಕೆ.ಪಿ ಜಯಕುಮಾರ್

Date:

12ನೇ ಶತಮಾನದಲ್ಲಿ ‘ಕಳಬೇಡ ಕೊಲಬೇಡ…’ ವಚನವೇ ನಂತರ ಸಂವಿಧಾನ ರಚಿಸಲು ಮೂಲ ಆಧಾರವಾಯಿತು. ವಚನಗಳು ಇಂದಿಗೂ ಪ್ರಸ್ತುತ. ಪ್ರತಿಯೊಂದು ವಚನವು ನಮ್ಮ ಬದುಕಿಗೆ ದಾರಿದೀಪವಾಗಿವೆ ಎಂದು ಉಪನ್ಯಾಸಕ ಕೆ.ಪಿ ಜಯಕುಮಾರ್ ಹೇಳಿದರು.

- Advertisement -

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸದಾಶಿವ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ, ಕಿರಿಕೊಡ್ಲಿ ಮಠ, ಕೊಡ್ಲಿಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಸದಾಶಿವ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂಗೈಕ್ಯ ಮಾಗನೂರು ಬಸಪ್ಪ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಮತ್ತು ಸಂಸ್ಕೃತಿಯ ಕುರಿತು ದತ್ತಿ ಉಪನ್ಯಾಸ ನೀಡುತ್ತಾ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್. ಐ ಮುನೀರ್ ಅಹ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕನ್ನಡ ಜನ ಜೀವನದಲ್ಲಿ ಜಾಗೃತಿಯನ್ನು ಉಂಟು ಮಾಡಿ, ಕೊಳೆಯನ್ನು ತೊಳೆದು ಹಸನಗೊಳಿಸಿ, ಅರಿವನ್ನು ಮೂಡಿಸಿ ಜನರ ಬದುಕಿಗೆ ಬೆಲೆಯನ್ನು ತಂದು ಕೊಟ್ಟಂತಹ ವಚನಕಾರರು ತಮ್ಮ ಬಹಳಷ್ಟು ವಚನಗಳಲ್ಲಿ ಅರಿವಿನ ಅನಂತ ಪದಗಳನ್ನು ತೆರೆದು ತೋರಿಸಿದ್ದಾರೆ. ಇಂತಹ ವಚನಗಳನ್ನು ರಚಿಸಿದ ಮೊದಲ ಶ್ರೇಯಸ್ಸು, ದೇವರ ದಾಸಿಮಯ್ಯ ಅಥವಾ ಜೇಡರ ದಾಸಯ್ಯ ಅವರಿಗೆ ಸಲ್ಲಬೇಕು.

ದತ್ತಿ ದಾನಿ ಎಂ.ಬಿ  ಸಂಗಮೇಶ್ವರ ಗೌಡ ರವರನ್ನು ಪ್ರತಿನಿಧಿಸಿದ ದಾವಣಗೆರೆಯ ಉಪನ್ಯಾಸಕ ಶಾಂತಕುಮಾರ್ ಮಾತನಾಡಿ, ಮಾಗನೂರು ಬಸಪ್ಪನವರು ವೃತ್ತಿಯಲ್ಲಿ ವ್ಯಾಪಾರಿಗಳಾಗಿದ್ದರು. ಅಂದಿನ ಕಾಲದಲ್ಲಿ ಅವರು ಸಲ್ಲಿಸಿದ ಸೇವೆ ಜನರ ಬದುಕನ್ನು ಹಸನಾಗಿಸಿತ್ತು. ಹಲವಾರು ವಿದ್ಯಾ ಸಂಸ್ಥೆಗಳನ್ನು ಪ್ರಾರಂಭಿಸಿದ ಬಸಪ್ಪನವರು ವಿದ್ಯೆಯೇ ಮಾನವನ ಅಭಿವೃದ್ಧಿಗೆ ಮೂಲ ಎಂಬುದನ್ನು ಕಂಡುಕೊಂಡಿದ್ದರು. ಅಂದಿನ ಕಾಲದಲ್ಲಿಯೇ ದಾವಣಗೆರೆಯಲ್ಲಿ ವೈದ್ಯಕೀಯ ಕಾಲೇಜನ್ನು ಪ್ರಾರಂಭ ಮಾಡುವ ಮೂಲಕ ಸೇವೆಗೆದ್ದಿದ್ದರು ಎಂದರು.

ಇದನ್ನೂ ಓದಿ ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಕಿರಿಕೊಡ್ಲಿ ಮಠದ ಪೀಠಾಧಿಪತಿಗಳಾದ ಸದಾಶಿವ ಸ್ವಾಮಿಗಳು ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ಬಸವಾದಿ ಶರಣರ ವಚನಗಳನ್ನು ಅಳವಡಿಸಿಕೊಂಡರೆ ಎಲ್ಲರ ಬದುಕು ಹಸನಾಗುತ್ತದೆ ಎಂದರು. ಇದೇ ವೇಳೆ ಸ್ವಾಮೀಜಿ ಅವರನ್ನು ಸನ್ಮಾನಿಸಲಾಯಿತು. ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಪಿ ಶಾಂತಮಲ್ಲಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕ ಚಂದ್ರಶೇಖರ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...