ಮಡಿಕೇರಿ | ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು: ಧರ್ಮಜ ಉತ್ತಪ್ಪ

Date:

ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಲಾಯಿತು.

- Advertisement -

ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, “ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಕೆವಿಎನ್ ಅವರು ಮಂಡಿಸುತ್ತಿರುವ ಮಾರುಕಟ್ಟೆ ಶಕ್ತಿಗಳ ಭಾಷೆಯೊಂದಿಗಿನ ಅನುಕೂಲಸಿಂಧು ಚಲನಶೀಲ ಸಂಬಂಧಗಳ ಕುರಿತ ಗ್ರಹಿಕೆಗಳು, 'ಸಾಮ್ರಾಜ್ಯಶಾಹಿಗಳು ಮತ್ತು ದೇಶೀಯ ಆಳುವ ವರ್ಗಗಳು ಭಾಷೆಯನ್ನು ರಾಜಕಾರಣದ ಅಸ್ತ್ರವನ್ನಾಗಿ ಬಳಸುತ್ತಿವೆ' ಎನ್ನುವ ಕನ್ನಡ ವಿಚಾರ ಸಾಹಿತ್ಯದಲ್ಲಿನ...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

ಗ್ಯಾರಂಟಿ ಯೋಜನೆಗಳಿಂದ ಅರ್ಹರು ವಂಚಿತರಾಗದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿ ಆಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಆಶಯದಂತೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಂತೆ ಸಲಹೆ ಮಾಡಿದರು.

ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹೀಗೆ ಪಂಚ ಯೋಜನೆಗಳು ತಲುಪಿದಾಗ ಸರ್ಕಾರಕ್ಕೆ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆಗಳ ಕುಶಾಲನಗರ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ ಅವರು ಮಾತನಾಡಿ, ಯುವನಿಧಿ ಯೋಜನೆಯಡಿ ಸಲ್ಲಿಕೆ ಆಗಿರುವ ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡದೆ, ಕಾಲಮಿತಿಯಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು ಎಂದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 1.30 ಲಕ್ಷ ಗುರಿಯಲ್ಲಿ 97,570 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹಣ ಪಾವತಿಯಾಗುತ್ತಿದ್ದು, ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯು ಪ್ರತೀ ತಿಂಗಳು 3000 ಮತ್ತು 1500 ನಿರುದ್ಯೋಗಿ ಭತ್ಯೆ ನೀಡುವ ಯೋಜನೆಯಾಗಿದ್ದು, ಅರ್ಹರಿಗೆ ತಲುಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 562 ಮಂದಿಗೆ ಯೋಜನೆ ತಲುಪುತ್ತಿದೆ. ಒಟ್ಟಾರೆ, ಇದುವರೆಗೆ 1030 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ರೇಖಾ ಗಣಪತಿ ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿ ಜೂನ್‍ವರೆಗೆ ಹಣ ಪಾವತಿಯಾಗಿದ್ದು, ಜುಲೈ ತಿಂಗಳ ಹಣ ಪಾವತಿಗೆ ಬಾಕಿ ಇದೆ ಎಂದು ತಿಳಿಸಿದರು.

ಮೆಟಿಂಗ್

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,15,229 ಮಂದಿ ಹೆಸರು ನೋಂದಣಿಯಾಗಿದ್ದು, 1,14,056 ಮಂದಿ ಮಂಜೂರಾಗಿದೆ. ಶೇ.98.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ನಟರಾಜು ಅವರು ತಿಳಿಸಿದರು.

ಸೆಸ್ಕ್ ಎಇಇ ವಿನಯ್ ಕುಮಾರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 1,53,623 ಕುಟುಂಬಗಳಲ್ಲಿ 1,51,907 ಕುಟುಂಬಗಳು ನೋಂದಣಿಯಾಗಿದ್ದು, ಶೇ.98.88 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮೇ, ಅಂತ್ಯದವರೆಗೆ 5905.30 ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದರು.

ಇದನ್ನು ಓದಿದ್ದೀರಾ? ಕೊಡಗು | ನಿಧಿ ಆಸೆಗೆ ಮನೆಯ ಕೋಣೆಯಲ್ಲೇ ಗುಂಡಿ ಕೊರೆದ ದುರುಳರು ಪೊಲೀಸರ ಬಲೆಗೆ

ಶಕ್ತಿ ಯೋಜನೆಯಡಿ ಆರಂಭದಿಂದ ಇದುವರೆಗೆ 62,04,618 ಮಂದಿ ಮಹಿಳೆಯರು ಪ್ರಯಾಣ ಮಾಡಿದ್ದು, 24.65 ಕೋಟಿ ರೂ. ಭರಿಸಲಾಗಿದೆ ಎಂದು ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷರಾದ ಮೋಹನ್‍ದಾಸ್, ವಿರಾಜಪೇಟೆ ಅಧ್ಯಕ್ಷರಾದ ಜಾನ್ಸನ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಸೆಂಬರ್ 12ರಂದು ಕೊಡಗು ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ ಅದಾಲತ್

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಗದಗ | ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ನೀಡವಂತೆ ರಾಜ್ಯಾಧ್ಯಕ್ಷ ಡಾ.ಹನುಮಂತಗೌಡ ಆರ್. ಕಲ್ಮನಿ ಮನವಿ

"ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಗಳಿಗೆ ಅನ್ವಯವಾಗದ...

ಹಾವೇರಿ | ನವೆಂಬರ್ 11ರಂದು ಜಿಲ್ಲೆಯಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

"ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಾಂಕೇತಿಕವಾಗಿ...

ಗದಗ | ಎಸ್ಐಆರ್ ಮೂಲಕ ಮತ ಕಳವು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

'ಬಿಜೆಪಿಯು ಎಸ್‌ಐಆರ್ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳನ್ನು ಕಳವು ಮಾಡುತ್ತಿದೆ. ಈಗಾಗಲೇ...