ಮಡಿಕೇರಿ | ಹೋರಾಟದಿಂದ ಹಿಂದೆ ಸರಿಯುವ ಪ್ರೆಶ್ನೆಯೇ ಇಲ್ಲ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್

Date:

ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡಿಸಿ ನಡೆಸುತ್ತಿರುವ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್‌ ಮೊಹ್ಸಿನ್ ಹೇಳಿದರು.

- Advertisement -

ಪಕ್ಷದ ರಾಷ್ಟೀಯ ಅಧ್ಯಕ್ಷ ಎಂ ಕೆ ಫೈಜಿ ಅವರ ಬಂಧನವನ್ನು ಖಂಡಿಸಿ ಮಡಿಕೇರಿ ನಗರದ ಐ.ಜಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಸರ್ಕಾರದ ಏಜೆನ್ಸಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ಅಮೀನ್‌ ಮುಹ್ಸಿನ್, “ರಾಷ್ಟೀಯ ಅಧ್ಯಕ್ಷರ ಬಂಧನವು ಅಕ್ಷಮ್ಯ ಅಪರಾಧವಾಗಿದ್ದು ಕೂಡಲೇ ಬಿಡುಗಡೆ ಗೊಳಿಸಬೇಕು. ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧದ ಹೋರಾಟವು ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ನಿದ್ದೆಗೆಡಿಸಿದ್ದು, ಹೋರಾಟವನ್ನು ಹತ್ತಿಕ್ಕುವ ಮತ್ತು ಹೋರಾಟದಿಂದ ಹಿಂದೆ ಸರಿಸುವ ಭಾಗವಾಗಿ ನಮ್ಮ ರಾಷ್ಟೀಯ ಅಧ್ಯಕ್ಷರನ್ನು ಬಂಧಿಸಲಾಗಿದೆ. ಪಕ್ಷದ ಕಟ್ಟ ಕಡೆಯ ಕಾರ್ಯಕರ್ತರಿರುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಮತ್ತು ಹೋರಾಟವನ್ನು ಇನ್ನಷ್ಟು ತೀವ್ರ ಗೊಳಿಸಲಾಗುವುದು” ಎಂದು ಎಚ್ಚರಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
WhatsApp Image 2025 03 06 at 3.48.01 PM

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ಮಾತನಾಡಿ, “ಎಸ್‌ಡಿಪಿಐ ಒಂದು ಕಾಡೆರ್ ಬೆಸ್ಡ್ ಪಕ್ಷ. ಆ ಪಕ್ಷದ ಒಬ್ಬ ಅಧ್ಯಕ್ಷರನ್ನು ಬಂಧನದಲ್ಲಿಡುವ ಮೂಲಕ ಚಳವಳಿಯನ್ನು ಹತ್ತಿಕ್ಕಲು ಸಾಧ್ಯವಾಗುವುದಿಲ್ಲ” ಎಂದರು.

ಇದನ್ನೂ ಓದಿ: ಮಡಿಕೇರಿ | ಕೊಡಗು ವಿವಿ ಮುಚ್ಚಿದರೆ ಜಿಲ್ಲೆಗೆ ಅಪಮಾನ ; ಕೆಎಂಎ ಅಧ್ಯಕ್ಷ ಸೂಫಿ ಹಾಜಿ

ಪ್ರತಿಭಟನೆಯಲ್ಲಿ ಪಕ್ಷದ ಕುಶಾಲನಗರ ಘಟಕಧ್ಯಕ್ಷ ಝಕ್ರಿಯ, ಮಡಿಕೇರಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಭಾಷಾ, ವಿರಾಜಪೇಟೆ ಕ್ಷೇತ್ರಾ ಉಪಾಧ್ಯಕ್ಷ ಯೂಸುಫ್, ಮಡಿಕೇರಿ ನಗರಾಧ್ಯಕ್ಷ ರಿಜ್ವಾನ್, ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಜಿಲ್ಲಾ ಉಪಾಧ್ಯಕ್ಷ ಮನ್ಸೂರ್ ಅಲಿ, ನಫೀಸ ಅಕ್ಬರ್, ವಿಮೆನ್ ಇಂಡಿಯಾ ಮೂಮೆಂಟ್ ಅಧ್ಯಕ್ಷೆ ಸಲಿಕತ್ ಹಾಗೂ ರಿಶಾನ ಸೇರಿದಂತೆ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...