ವಿಜಯಪುರ | ಮಡಿವಾಳ ಮಾಚಿದೇವ ಜನ್ಮದಿನ ಆಚರಣೆ

Date:

Advertisements

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಬಸವ ಕಲ್ಯಾಣದ ಅನುಭವ ಮಂಟಪವು 12ನೇ ಶತಮಾನದಲ್ಲಿ ಸಮಸಮಾಜದ ಕನಸಿನಿಂದ ನಿರ್ಮಾಣವಾಗಿತ್ತು. ಆ ಆದಿಸೆಯಲ್ಲಿ ತಮ್ಮ ವಚನಗಳ ಮೂಲಕ ಸಮಸಮಾಜವನ್ನು ಪ್ರತಿಪಾದಿಸಿದವರು ಮಡಿವಾಳ ಮಾಚಿದೇವ ಶರಣರು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದರು.

ವಿಜಯಪುರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ  ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಶರಣರು ಅಂದು ಹಾಕಿಕೊಟ್ಟ ಹಾಗೂ ತಿಳಿಸಿದ ವಿಚಾರಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ. ಅಂದಿನ ಬಸವಾದಿ ಶರಣರು ಕಾಯಕ ತತ್ವವನ್ನು ಅನುಸರಿಸಬೇಕು. ಅವರ ಜೀವನ ಆದರ್ಶಗಳನ್ನು ಅಳವಡಿಕೊಳ್ಳಬೇಕು” ಎಂದು ಅವರು ಹೇಳಿದರು.

ಅಪರ ಪೊಲೀಸ್ ವರಿಷ್ಟಾಧಿಕಾರಿ ರಾಮನಗೌಡ ಹಟ್ಟಿ ಮಾತನಾಡಿ, “ಶರಣರು 12ನೇ ಶತಮಾನದಲ್ಲಿ ಸಮಾರು 770 ಶಿವಶರಣರು ಒಂದೆಡೆ ಸೇರಿ ಅನುಭವ ಮಂಟಪದಲ್ಲಿ ಸಾಮಾಜಿಕ ಪರಿವರ್ತನೆಗಾಗಿ ಏಕತೆಗಾಗಿ ಚಿಂತನ-ಮಂಥನ ಹಾಗೂ ಘೋಷ್ಟಿಗಳನ್ನು ನಡೆಸುತ್ತಿದ್ದರು. ಅಂದಿನ ವಚನಗಳು ಇಂದು ನಮ್ಮ ಜೀವನೋಪಾಯ ನಡೆಸಲು ಒಂದು ದಾರಿಯಾಗಿವೆ. ಶಿವಶರಣರ ವಚನಗಳು ಸಮಾಜಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಲ್ಲದೆ, ವಚನಗಳಿಂದ ನಾವುಗಳೂ ಕಲಿಯಬೇಕಾದದ್ದು ಬಹಳಷ್ಟಿದೆ. ನಾವು ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು. ನಾವೆಲ್ಲರೂ ಒಂದೆ ಎನ್ನುವ ಭಾವನೆ ನಮ್ಮಲ್ಲಿರಬೇಕು. ಅದರೊಂದಿಗೆ ಎಲ್ಲ ಸಮಾಜವನ್ನು ಪ್ರಿತಿಯಿಂದ, ಗೌರವದಿಂದ ಕಾಣಬೇಕು” ಎಂದು ಹೇಳಿದರು.

Advertisements

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಮಂಜುನಾಥ ಜನಗೊಂಡ , ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಹೊಂಗಯ್ಯ, ಜಿ.ಪಂ ಯೋಜನಾಧಿಕಾರಿ ಎ.ಬಿ ಅಲ್ಲಾಪುರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿ ಅಯ್ಯುಬ್ ದ್ರಾಕ್ಷಿ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷರಾದ ಸಾಯಬಣ್ಣ ಮಡಿವಾಳರ, ಸಮಾಜದ ಮುಖಂಡರುಗಳಾದ ಬಾಬು ಬಳ್ಳಾರಿ, ಮುತ್ತಪ್ಪ ಮಡಿವಾಳರ, ಪ್ರಭು ಮಡಿವಾಳರ, ಶಿವಪ್ಪ ಹುಬ್ಬಳ್ಳಿ, ಶ್ರೀಶೈಲ ಅಗಸರ, ಮಲಕಪ್ಪ ಹುಬ್ಬಳ್ಳಿ, ಸಂತೋಷ ಬಾಗಲಕೋಟ, ವಿದ್ಯಾವತಿ ಅಂಕಲಗಿ, ಭೀಮರಾಯ ಜಿಗಜಿಣಗಿ, ದೇವೇಂದ್ರ ಮಿರೇಕರ, ಗಿರೀಶ ಕುಲಕರ್ಣಿ ಹಾಗೂ ಇತರರು ಉಪಸ್ಥಿತರಿದ್ದರು. ಸುಭಾಸ ಕಲ್ಲೂರ ನಿರೂಪಿಸಿದರು. ಇದಕ್ಕೂ ಮೊದಲು ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಚಾಲನೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X