ತುಮಕೂರು | ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನ.26ರಿಂದ ಮಹಾಧರಣಿ

Date:

Advertisements

ಜನ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಿ ಜನಪರ ನೀತಿಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 26 ರಿಂದ 28 ರವರೆಗೆ ಮಹಾಧರಣಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ವೆಂಕಟೇಗೌಡ ತಿಳಿಸಿದ್ದಾರೆ.

ತುಮಕುರು ಜಿಲ್ಲೆಯ ಗುಬ್ಬಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ದೆಹಲಿಯಲ್ಲಿ ಸತತ 13 ತಿಂಗಳ ಕಾಲ ರೈತರು ಐತಿಹಾಸಿಕ ಹೋರಾಟ ನಡೆಸಿದ್ದರು. ಹೋರಾಟದ ಪರಿಣಾಮ ಮೋದಿ ಸರ್ಕಾರ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಿತು. ಆದರೂ ಕನಿಷ್ಠ ಬೆಂಬಲ ಬೆಲೆ ಮತ್ತು ವಿದ್ಯುತ್ ತಿದ್ದುಪಡಿ ಮಸೂದೆ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರವು ರೈತರಿಗೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದ್ದಾರೆ.

“ಸರ್ಕಾರದ ಧೋರಣೆಗಳು ರೈತಾಪಿ ವರ್ಗವನ್ನು ಸಾಲದ ಸುಳಿಗೆ ಸಿಲುಕಿಸಿದೆ. ರೈತರು ಕೃಷಿಯಿಂದ ವಿಮುಖರಾಗುವಂತೆ ಮಾಡಿದೆ. ಕೃಷಿ ಆರ್ಥಿಕ ಬಿಕಟ್ಟಿನಲ್ಲಿ ಸಾಗುತ್ತಿದೆ. ಹಾಗಾಗಿ ದೇಶದ ಸಂಪತ್ತನ್ನು ಸಂರಕ್ಷಿಸಿ ಜನರ ಬದುಕು ಉಳಿಸಲು ಜನಪರ ನೀತಿಗಳಿಗಾಗಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ನವಂಬರ್ 26 ರಿಂದ 28 ರವರೆಗೆ ಮೂರು ದಿನಗಳವರೆಗೆ ದೇಶಾದ್ಯಂತ ಎಲ್ಲ ರಾಜಭವನಗಳ ಮುಂದೆ ಸಂಯುಕ್ತ ಕಿಸನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮಹಾಧರಣಿ ನಡೆಸುತ್ತಿವೆ. ಇದರ ಭಾಗವಾಗಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಹಾಧರಣಿ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

Advertisements

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಲೋಕೇಶ್, ಶಿವಕುಮಾರ್, ಯತೀಶ್, ಜಗದೀಶ್, ಶಿವಣ್ಣ, ಮಹದೇವು ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X